ಬುಧವಾರ, ಜುಲೈ 15, 2020
23 °C

ಮಗಳ ಮೇಲೆ ಅತ್ಯಾಚಾರ ಎಸಗಿದ ತಂದೆ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಳ್ಳಂದೂರು ಠಾಣೆ ವ್ಯಾಪ್ತಿಯಲ್ಲಿ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ತಂದೆ ರಾಕೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ.

‘ಸ್ಥಳೀಯ ನಿವಾಸಿಯಾದ 19 ವರ್ಷದ ಯುವತಿ ದೂರು ನೀಡಿದ್ದರು. ಅದರನ್ವಯ ರಾಕೇಶ್‌ನನ್ನು ಬಂಧಿಸಲಾಗಿದೆ. ಆತ ತಪ್ಪೊಪ್ಪಿಕೊಂಡಿದ್ದಾನೆ’ ಎಂದೂ ತಿಳಿಸಿದರು.

‘ಬಿಹಾರದ ರಾಕೇಶ್, ಸ್ಥಳೀಯ ನಿವಾಸಿಯಾದ ಮಹಿಳೆಯನ್ನು ಮದುವೆಯಾಗಿದ್ದ. ಆಕೆಗೆ ವಿಚ್ಛೇದನ ನೀಡಿ ಎರಡನೇ ಮದುವೆಯಾಗಿದ್ದ. ಎರಡನೇ ಪತ್ನಿ ಮನೆಯಲ್ಲಿ ವಾಸವಿದ್ದ. ಮೊದಲ ಪತ್ನಿಯ ಮಗಳಾದ ಯುವತಿ, ತಂದೆ ಮನೆಗೆ ಆಗಾಗ ಹೋಗಿ ಬರುತ್ತಿದ್ದಳು. ಇತ್ತೀಚೆಗೆ 15 ದಿನ ತಂದೆ ಮನೆಯಲ್ಲಿ ಇದ್ದಳು. ಜೂ. 23ರಂದು ರಾತ್ರಿ ಸಂತ್ರಸ್ತೆ ನೆಗಡಿ ಎಂದು ತಂದೆ ಬಳಿ ಹೇಳಿದ್ದಳು. ನೆಗಡಿ ಮಾತ್ರೆಯೆಂದು ನಿದ್ರೆ ಮಾತ್ರೆ ನೀಡಿದ್ದ ಆರೋಪಿ, ಯುವತಿ ಮಲಗಿದ ನಂತರ ಅತ್ಯಾಚಾರ
ಎಸಗಿದ್ದ. ಮರುದಿನ ಯುವತಿಯ ಗುಪ್ತಾಂಗದಲ್ಲಿ ನೋವು ಕಾಣಿಸಿಕೊಂಡಿತ್ತು. ಮಲತಾಯಿಗೆ ವಿಷಯ ತಿಳಿಸಿದರೂ ಪ್ರಯೋಜನವಾಗಿರಲಿಲ್ಲ.ನೊಂದ ಯುವತಿ, ಮನೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಳು. ಸ್ನೇಹಿತರು ಆಕೆಯನ್ನು ರಕ್ಷಿಸಿದ್ದರು. ನಂತರ ಠಾಣೆಗೆ ಬಂದು ದೂರು ನೀಡಿದ್ದರು’ ಎಂದೂ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು