ಮಂಗಳವಾರ, ಡಿಸೆಂಬರ್ 10, 2019
19 °C

ಶಾಸಕನ ಮಗನೆಂದು ಬೆದರಿಸಿ ಅತ್ಯಾಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶಾಸಕರೊಬ್ಬರ ಮಗನೆಂದು ಹೇಳಿಕೊಂಡು ಯುವತಿಯೊಬ್ಬರನ್ನು ಪರಿಚಯ ಮಾಡಿಕೊಂಡಿದ್ದ ಜಹಾಂಗೀರ್ ಎಂಬಾತ ಆಕೆಯ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದ್ದು, ಆ ಸಂಬಂಧ ಹಲಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘26 ವರ್ಷದ ಯುವತಿ ನೀಡಿರುವ ದೂರಿನಡಿ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ. ಆರೋಪಿ ಜಹಾಂಗೀರ್ ಅಲಿಯಾಸ್ ಕಾರ್ತಿಕ್ ರೆಡ್ಡಿ ತಲೆಮರೆಸಿಕೊಂಡಿದ್ದಾನೆ’ ಎಂದು ಹೇಳಿದರು.

‘ನ. 7ರಂದು ರಾತ್ರಿ ಯುವತಿಯು ಎಂ.ಜಿ.ರಸ್ತೆಯ ಹೋಟೆಲೊಂದಕ್ಕೆ ಹೋಗಿದ್ದರು. ಅಲ್ಲಿಗೆ ಬಂದಿದ್ದ ಆರೋಪಿ ಶಾಸಕನ ಮಗನೆಂದು ಹೇಳಿಕೊಂಡು ಪರಿಚಯ ಮಾಡಿಕೊಂಡಿದ್ದ. ತಮ್ಮದೇ ಹೋಟೆಲ್ ಉದ್ಯಮವಿದ್ದು ಕೆಲಸ ಕೊಡಿಸುವುದಾಗಿ ನಂಬಿಸಿದ್ದ. ನಂತರ ಯುವತಿಯನ್ನು ಕಾರಿನಲ್ಲಿ ಮಾರತಹಳ್ಳಿಯ ಹೊರವರ್ತುಲ ರಸ್ತೆಯಲ್ಲಿರುವ ಹೋಟೆಲೊಂದಕ್ಕೆ ಕರೆದೊಯ್ದಿದ್ದ’ ಎಂದರು.

‘ತನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಆರೋಪಿ ಒತ್ತಾಯಿಸಿದ್ದ. ಅದಕ್ಕೆ ಯುವತಿ ಒಪ್ಪಿರಲಿಲ್ಲ. ತನ್ನ ಬಳಿ ಪಿಸ್ತೂಲ್ ಇದ್ದು, ಸಾಯಿಸುವುದಾಗಿ ಆರೋಪಿ ಬೆದರಿಕೆ ಹಾಕಿದ್ದ. ಯುವತಿ ಮೇಲೆ ಅತ್ಯಾಚಾರ ಸಹ ಎಸಗಿದ್ದ. ಮನೆಯಿಂದ ತಪ್ಪಿಸಿಕೊಂಡು ಬಂದು ಯುವತಿ ದೂರು ನೀಡಿದ್ದಾರೆ’ ಎಂದು ಪೊಲೀಸರು ಹೇಳಿದರು.  

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು