ಅತ್ಯಾಚಾರ ಆರೋಪ: ಜೈಲು ಶಿಕ್ಷೆ ರದ್ದು

7
ಖಾಸಗಿ ಭಾಗ ಮುಟ್ಟಿದ ಆರೋಪ: ₹ 30 ಸಾವಿರ ದಂಡ

ಅತ್ಯಾಚಾರ ಆರೋಪ: ಜೈಲು ಶಿಕ್ಷೆ ರದ್ದು

Published:
Updated:

ಬೆಂಗಳೂರು: ಐದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ವಿಧಿಸಿದ್ದ 10 ವರ್ಷ ಜೈಲು ಶಿಕ್ಷೆಯನ್ನು ಹೈಕೋರ್ಟ್‌ ರದ್ದುಪಡಿಸಿದೆ. ಆದರೆ, ಬಾಲಕಿಯ ದೇಹದ ಖಾಸಗಿ ಭಾಗಗಳನ್ನು ಮುಟ್ಟಿದ ಆರೋಪದಡಿ ₹ 30 ಸಾವಿರ ದಂಡ ವಿಧಿಸಿದೆ.

ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಆರೋಪಿ ಸುತಗಟ್ಟಿ ಗ್ರಾಮದ ಈರಪ್ಪ (55) ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಕೆ.ಸೋಮಶೇಖರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ದಂಡದ ಮೊತ್ತವನ್ನು ಸಂತ್ರಸ್ತೆಯ ತಾಯಿಗೆ ನೀಡಿ’ ಎಂದು ಆದೇಶಿಸಿದೆ.

ಪ್ರಕರಣವೇನು?: ‘ಈರಪ್ಪ ನನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ’ ಎಂದು ಆರೋಪಿಸಿ ಗಂಗಮ್ಮ 2014ರ ಸೆಪ್ಟೆಂಬರ್ 14ರಂದು ನೇಸರ್ಗಿ ಠಾಣೆಗೆ ದೂರು ಸಲ್ಲಿಸಿದ್ದರು.

‘2014ರ ಸೆಪ್ಟೆಂಬರ್ 7ರಂದು ನನ್ನ ಮಗಳನ್ನು ಮನೆಯಲ್ಲಿ ಬಿಟ್ಟು ಕೂಲಿಗೆ ಹೋಗಿದ್ದೆ. ಆ ದಿನ ಮನೆ ಮುಂದೆ ಆಟವಾಡುತ್ತಿದ್ದ ಆಕೆಯನ್ನು, ಈರಪ್ಪ ತನ್ನ ಮನೆಯೊಳಗೆ ಕರೆದೊಯ್ದು ಕೃತ್ಯ ಎಸಗಿದ್ದಾನೆ’ ಎಂದು ಗಂಗಮ್ಮ ಆರೋಪಿಸಿದ್ದರು.

ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದ ಪೊಲೀಸರು, ಮಕ್ಕಳ ವಿರುದ್ಧದ ಲೈಂಗಿಕ ದೌರ್ಜನ್ಯ ಕಾಯ್ದೆಯಡಿ (ಪೊಕ್ಸೊ) ಪ್ರಕರಣ ದಾಖಲಿಸಿದ್ದರು. ಈ ಕುರಿತು ಬೆಳಗಾವಿ 3ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. 

ನ್ಯಾಯಾಲಯ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ₹ 15 ಸಾವಿರ ದಂಡ ವಿಧಿಸಿತ್ತು. ದಂಡ ಪಾವತಿಸಲು ವಿಫಲವಾದರೆ ಆರು ತಿಂಗಳ ಕಠಿಣ ಜೈಲು ಶಿಕ್ಷೆ ಅನುಭವಿಸಬೇಕು ಎಂದು 2016ರ ಜೂನ್ 17ರಂದು ಆದೇಶಿಸಿತ್ತು.

 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !