ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದ ಸಂಬಂಧ ಮುನಿರತ್ನ ಅವರನ್ನು ಶುಕ್ರವಾರ ಬೆಳಿಗ್ಗೆ ಬಂಧಿಸಲಾಗಿದ್ದು, ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದಕ್ಕೂ ಮೊದಲು ಮುನಿರತ್ನ ವಿರುದ್ಧ ದಾಖಲಾಗಿದ್ದ ಜಾತಿ ನಿಂದನೆ ಹಾಗೂ ಕೊಲೆ ಬೆದರಿಕೆ ಪ್ರಕರಣಗಳೂ ಸೇರಿ ಒಟ್ಟು ಮೂರು ಪ್ರಕರಣಗಳ ತನಿಖೆ ನಡೆಸಲು ಸರ್ಕಾರ ಎಸ್‌ಐಟಿ ರಚಿಸಿದ್ದು, ತನಿಖಾಧಿಕಾರಿಗಳು ಸಿದ್ಧತೆ ಆರಂಭಿಸಿದ್ದಾರೆ. ಸಿಐಡಿ (ಆರ್ಥಿಕ ಅಪರಾಧಗಳು) ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದ ಎಸ್‌ಐಟಿ ರಚಿಸಲಾಗಿದ್ದು, ಮೂವರು ಐಪಿಎಸ್ ಅಧಿಕಾರಿಗಳು ತಂಡದ ಸದಸ್ಯರಾಗಿದ್ದಾರೆ.