ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ದೌರ್ಜನ್ಯ: ಆರೋಪಿಗಳನ್ನು ಥಳಿಸಿದ ಜನ

Published 29 ಏಪ್ರಿಲ್ 2024, 19:40 IST
Last Updated 29 ಏಪ್ರಿಲ್ 2024, 19:40 IST
ಅಕ್ಷರ ಗಾತ್ರ

ಬೆಂಗಳೂರು: ಬಾಲಕಿಯನ್ನು ವಿವಸ್ತ್ರಗೊಳಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಇಬ್ಬರು ಆರೋಪಿಗಳನ್ನು ಸಾರ್ವಜನಿಕರೇ ಹಿಡಿದು ಥಳಿಸಿ ಕಾಡುಗೋಡಿ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.

‘ಏಪ್ರಿಲ್ 24ರಂದು ನಡೆದಿರುವ ದೌರ್ಜನ್ಯ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳಾದ ಸಚಿನ್ ಹಾಗೂ ಶೇಖರ್‌ನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಬಾಲಕಿಯು ಪೋಷಕರ ಜೊತೆ ವಾಸವಿದ್ದಳು. ಇವರ ಮನೆ ಸಮೀಪದಲ್ಲಿಯೇ ಆರೋಪಿಗಳು ನೆಲೆಸಿದ್ದರು. ಬಾಲಕಿಯ ಪೋಷಕರು ಕೆಲಸ ನಿಮಿತ್ತ ಮನೆಯಿಂದ ಹೊರಗಡೆ ಹೋಗಿದ್ದರು. ತಿಂಡಿ ಕೊಡಿಸುವುದಾಗಿ ಹೇಳಿದ್ದ ಆರೋಪಿಗಳು, ಬಾಲಕಿಯನ್ನು ಮನೆಗೆ ಕೊರೆದೊಯ್ದಿದ್ದರು. ಅಲ್ಲಿಯೇ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು’ ಎಂದು ತಿಳಿಸಿದರು.

‘ತೀವ್ರ ನೋವಿನಿಂದ ಬಾಲಕಿ ಚೀರಾಡಿದ್ದಳು. ರಕ್ಷಣೆಗೆ ಹೋಗಿದ್ದ ಸ್ಥಳೀಯರು, ಆರೋಪಿಗಳನ್ನು ಹಿಡಿದು ಥಳಿಸಿದ್ದರು. ಗಸ್ತು ವಾಹನ ಸಿಬ್ಬಂದಿ ಕೈಗೆ ಆರೋಪಿಗಳನ್ನು ಒಪ್ಪಿಸಿದ್ದರು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT