ಬುಧವಾರ, ಜನವರಿ 20, 2021
27 °C

ವೃದ್ಧೆ ಮೇಲೆ ಅತ್ಯಾಚಾರ; ಯುವಕ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋರಮಂಗಲದ 71 ವರ್ಷದ ವೃದ್ಧೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿ ಜ್ಯೂಲಿ ರೋಸಾ (31) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

’ಜ. 2ರಂದು ನಡೆದಿದೆ ಎನ್ನಲಾದ ಕೃತ್ಯದ ಬಗ್ಗೆ ವೃದ್ಧೆ ದೂರು ನೀಡಿದ್ದರು. ಅದನ್ನು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ. ಸದ್ಯ ಆತ ನ್ಯಾಯಾಂಗ ಬಂಧನಲ್ಲಿದ್ದಾನೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ವೃದ್ಧೆ, ಸ್ವಂತ ಮನೆಯಲ್ಲಿ ಒಬ್ಬಂಟಿಯಾಗಿ ನೆಲೆಸಿದ್ದಾರೆ. ಪಕ್ಕದ ಮನೆಯಲ್ಲಿ ಬಾಡಿಗೆಗೆ ಇದ್ದ ಆರೋಪಿ ಜ್ಯೂಲಿ, ಆಗಾಗ ವೃದ್ಧೆ ಮನೆಗೆ ಹೋಗಿಬರುತ್ತಿದ್ದ. ಜ. 2ರಂದು ಮಧ್ಯಾಹ್ನ ವೃದ್ಧೆ ಮನೆಗೆ ಹೋಗಿದ್ದಾಗ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಪ್ರಜ್ಞೆ ತಪ್ಪಿ ಬಿದ್ದಿದ್ದ ವೃದ್ಧೆ, ಕೆಲ ಗಂಟೆಗಳ ನಂತರ ಎಚ್ಚರವಾಗಿ ಪರಿಚಯಸ್ಥರಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಈ ಸಂಗತಿ ದೂರಿನಲ್ಲಿತ್ತು’ ಎಂದೂ ಮೂಲಗಳು ಹೇಳಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು