ಬುಧವಾರ, ಮೇ 18, 2022
23 °C

ಪಿಆರ್‌ಆರ್‌ ಯೋಜನೆಗೆ ಶೀಘ್ರ ಅನುಮೋದನೆ- ಎಸ್‌.ಆರ್‌.ವಿಶ್ವನಾಥ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 'ನಗರದ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಪೆರಿಫರೆಲ್ ವರ್ತುಲ ರಸ್ತೆ ಯೋಜನೆಗೆ (ಪಿಆರ್‌ಆರ್‌) ಸರ್ಕಾರ ಶೀಘ್ರವೇ ಅನುಮೋದನೆ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ’ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌.ಆರ್‌.ವಿಶ್ವನಾಥ್‌ ತಿಳಿಸಿದರು.

ಗಣರಾಜ್ಯೋತ್ಸವದ ಅಂಗವಾಗಿ ಬಿಡಿಎ ಕೇಂದ್ರ ಕಚೇರಿ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಬುಧವಾರ ಮಾತನಾಡಿದರು.

‘ಕೆಲವು ಕೆಟ್ಟ ಸಿಬ್ಬಂದಿಯ ಕೆಲಸಗಳಿಂದಾಗಿ ಬಿಡಿಎಗೆ ಕೆಟ್ಟ ಹೆಸರು ಬರುವಂತಾಗಿದೆ. ಇದರ ಹೊರತಾಗಿಯೂ ಪ್ರಾಧಿಕಾರವು ಉತ್ತಮ ರೀತಿಯಲ್ಲಿ ಜನಪರವಾದ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ. ಜನರಿಗೆ ಮತ್ತಷ್ಟು ಹತ್ತಿರವಾಗುವಂತಹ ಕೆಲಸಗಳನ್ನು ಮಾಡಬೇಕೆಂದು ಮುಖ್ಯಮಂತ್ರಿಯವರು ಸೂಚನೆ ನೀಡಿದ್ದಾರೆ’ ಎಂದರು.

ಬಿಡಿಎ ಆಯುಕ್ತ ಎಂ.ಬಿ.ರಾಜೇಶ್ ಗೌಡ, ಕಾರ್ಯದರ್ಶಿ ಆನಂದ್ ಮತ್ತು ಸಿಬ್ಬಂದಿ ಭಾಗವಹಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು