ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಚ್‌ನ ಅಧ್ಯಕ್ಷ ಜೆ.ಸಿ. ಪ್ರಕಾಶ್, ‘ಪರಿಶಿಷ್ಟ ಜಾತಿ (ಎಸ್.ಸಿ) ಮತ್ತು ಪರಿಶಿಷ್ಟ ಪಂಗಡದ (ಎಸ್.ಟಿ) ಮೀಸಲಾತಿ ವರ್ಗೀಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪಿನ ಅನುಸಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಅಧಿವೇಶನ ಕರೆದು, ಆಯೋಗದ ವರದಿಯ ಶಿಫಾರಸುಗಳನ್ನು ಯಥಾವತ್ತಾಗಿ ಜಾರಿಗೆ ತರಬೇಕು. ಮಾದಿಗ ಜನಾಂಗದ ಮೂಲಪುರುಷನಾದ ಸಾಮ್ರಾಟ್ ಅಶೋಕನ ಜಯಂತಿಯನ್ನು ಸರ್ಕಾರ ಆಚರಿಸಿ, ರಜೆ ನೀಡಬೇಕು. ಅಶೋಕನ ಪುತ್ಥಳಿಯನ್ನು ವಿಧಾನಸೌಧದ ಮುಂಭಾಗ ಪ್ರತಿಷ್ಠಾಪಿಸಬೇಕು. ಪರಿಶಿಷ್ಟರ ಬದುಕಿನ ನಿರ್ವಹಣೆಗೆ ಪ್ರತಿ ಕುಟುಂಬಕ್ಕೆ 5 ಎಕರೆ ಕೃಷಿ ಜಮೀನು ಮತ್ತು ಕೊಳವೆ ಬಾವಿಯನ್ನು ಸರ್ಕಾರ ಮಂಜೂರು ಮಾಡಬೇಕು’ ಎಂದು ಒತ್ತಾಯಿಸಿದರು.