‘ಇಲಿ ಜ್ವರ ಪ್ರಕರಣಗಳು ಹೆಚ್ಚುವುದಿಲ್ಲ’

7

‘ಇಲಿ ಜ್ವರ ಪ್ರಕರಣಗಳು ಹೆಚ್ಚುವುದಿಲ್ಲ’

Published:
Updated:

ಬೆಂಗಳೂರು: ‘ಕೊಡಗಿನಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುವುದರಿಂದ ಇಲಿ ಜ್ವರ ಪ್ರಕರಣಗಳು ಹೆಚ್ಚಲಿವೆ ಎಂಬ ವರದಿ ಸುಳ್ಳು’ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

‘ಪ್ರತಿವರ್ಷ ಇಲಿ ಜ್ವರದ ಪ್ರಕರಣಗಳು ದಾಖಲಾಗುತ್ತವೆ. ನೆರೆ ಪರಿಸ್ಥಿತಿಯನ್ನು ಇಲಾಖೆ ಉತ್ತಮವಾಗಿ ನಿಭಾಯಿಸಿದೆ. ಕೊಡಗಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಈಗಾಗಲೇ ತೆಗೆದುಕೊಳ್ಳಲಾಗಿದೆ’ ಎಂದು ವಾಹಕಗಳ ಮೂಲಕ ಹರಡುವ ರೋಗಗಳ ನಿಯಂತ್ರಣ ರಾಷ್ಟ್ರೀಯ ಕಾರ್ಯಕ್ರಮದ (ಎನ್‌ವಿಬಿಡಿಸಿಪಿ) ಜಂಟಿ ನಿರ್ದೇಶಕ ಡಾ. ಸಜ್ಜನ್‌ ಶೆಟ್ಟಿ ತಿಳಿಸಿದರು.

‘ರಾಜ್ಯದಲ್ಲಿ 2017ರಲ್ಲಿ 475 ಇಲಿ ಜ್ವರ ಪ್ರಕರಣಗಳು ದೃಢಪಟ್ಟಿದ್ದವು. ಈ ಪೈಕಿ ಇಬ್ಬರು ಸಾವನ್ನಪ್ಪಿದ್ದರು. ಪ್ರಸಕ್ತ ವರ್ಷ ಶಿವಮೊಗ್ಗ, ಹಾವೇರಿ, ಉತ್ತರಕನ್ನಡ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಪ್ರಕರಣಗಳು ವರದಿಯಾಗಿವೆ. ಜುಲೈ ಅಂತ್ಯದವರೆಗೆ 136 ಪ್ರಕರಣಗಳು ದಾಖಲಾಗಿವೆ. ಆದರೆ, ಯಾವುದೇ ಸಾವು ವರದಿಯಾಗಿಲ್ಲ’ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !