ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೇವ್‌ಪಾರ್ಟಿ: ನಟಿ ಹೇಮಾಗೆ ಮತ್ತೆ ನೋಟಿಸ್‌

Published 30 ಮೇ 2024, 0:10 IST
Last Updated 30 ಮೇ 2024, 0:10 IST
ಅಕ್ಷರ ಗಾತ್ರ

ಬೆಂಗಳೂರು: ಆನೇಕಲ್‌ ತಾಲ್ಲೂಕಿನ ಜಿ.ಆರ್‌.ಫಾರ್ಮ್‌ ಹೌಸ್‌ನಲ್ಲಿ ನಡೆದಿದ್ದ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಿದ್ದ ತೆಲುಗು ನಟಿ ಹೇಮಾ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎರಡನೇ ಬಾರಿಗೆ ಸಿಸಿಬಿ ನೋಟಿಸ್‌ ಜಾರಿ ಮಾಡಿದೆ.

ತನಿಖಾಧಿಕಾರಿ ಎದುರು ಮೇ 25ರಂದು ಹಾಜರಾಗುವಂತೆ ನಟಿ ಹೇಮಾ ಸೇರಿದಂತೆ 8 ಆರೋಪಿಗಳಿಗೆ ಸಿಸಿಬಿ ಪೊಲೀಸ್‌ ನೋಟಿಸ್‌ ಜಾರಿ ಮಾಡಿತ್ತು. ಆದರೆ, ಅವರು ಅನಾರೋಗ್ಯದ ಕಾರಣ ನೀಡಿ, ಒಂದು ವಾರ ಕಾಲಾವಕಾಶ ಕೋರಿದ್ದರು. ಈಗ ಮತ್ತೊಂದು ನೋಟಿಸ್‌ ಜಾರಿಗೊಳಿಸಿರುವ ಪೊಲೀಸರು, ಜೂನ್‌ 1ರಂದು ವಿಚಾರಣೆಗ ಹಾಜರಾಗುವಂತೆ ಸೂಚಿಸಿದ್ಧಾರೆ.

ಮೇ 20ರಂದು ರಾತ್ರಿ ಬೆಂಗಳೂರು ಹೊರವಲಯದ ಹೆಬ್ಬಗೋಡಿ ಠಾಣಾ ವ್ಯಾಪ್ತಿಯ ಜಿ.ಆರ್. ಫಾರ್ಮ್ ಹೌಸ್‌ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ದಾಳಿ ವೇಳೆ ವಿವಿಧ ಮಾದರಿಯ ಡ್ರಗ್ಸ್‌ಗಳು ಪತ್ತೆಯಾಗಿದ್ದವು. ಮಾದಕ ವಸ್ತು ಪೂರೈಸಿದ ಆರೋಪದ ಮೇಲೆ ಐವರನ್ನು ಪೊಲೀಸರು ಬಂಧಿಸಿದ್ದರು. ಮಾದಕ ವಸ್ತು ಸೇವನೆ ಪತ್ತೆಹಚ್ಚಲು ಪಾರ್ಟಿಯಲ್ಲಿದ್ದ 100 ಮಂದಿಯ ರಕ್ತ ಮಾದರಿಯನ್ನು ಸಂಗ್ರಹಿಸಿ ವೈದ್ಯಕೀಯ ಪರೀಕ್ಷೆಗೆ ಕಳಹಿಸಿದ್ದರು. ಅದರಲ್ಲಿ ಹಲವರು ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ. ಹೀಗಾಗಿ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸುತ್ತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT