ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜಂಗಲ್‌ ಸಂಸ್ಕೃತಿ’ಯ ಸಿದ್ದರಾಮಯ್ಯ: ರವಿಕುಮಾರ್‌

Last Updated 4 ಡಿಸೆಂಬರ್ 2020, 15:22 IST
ಅಕ್ಷರ ಗಾತ್ರ

ಬೆಂಗಳೂರು: ‘ಲವ್‌ ಜಿಹಾದ್‌’ ತಡೆಗೆ ಕಠಿಣ ಕಾಯ್ದೆ ತರಲು ಸರ್ಕಾರ ಮುಂದಾಗಿರುವ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೀಡಿರುವ ಬೇಜವಾಬ್ದಾರಿ ಹೇಳಿಕೆಯು ಜಂಗಲ್‌ ಸಂಸ್ಕೃತಿಯನ್ನು ಎತ್ತಿ ತೋರಿಸುತ್ತದೆ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಹೇಳಿದ್ದಾರೆ.

ಹಿಂದೂ ಯುವತಿಯರು ಮತ್ತು ಮಹಿಳೆಯರನ್ನು ‘ಲವ್‌ ಜಿಹಾದ್‌’ ಮೂಲಕ ಮತಾಂತರಗೊಳಿಸುವ ಕಾರ್ಯ ವ್ಯವಸ್ಥಿತವಾಗಿ ನಡೆಯುತ್ತಿದೆ. ಇಂತಹ ಅನಾಚಾರಕ್ಕೆ ಕಡಿವಾಣ ಹಾಕಲು ಸರ್ಕಾರ ಕಾನೂನು ರೂಪಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

‘ಕ್ರಾಸ್‌ ಬ್ರೀಡ್‌’ ಕುರಿತು ಮಾತನಾಡಿರುವ ಸಿದ್ದರಾಮಯ್ಯ ಅವರು ರಾಜ್ಯದ ಜನರ ಕ್ಷಮೆ ಯಾಚಿಸಬೇಕು. ಭಾರತದಲ್ಲಿ ‘ಲವ್‌ ಜಿಹಾದ್‌’ ನಡೆಸಲು ಇಲ್ಲಿನ ಎನ್‌ಜಿಒಗಳಿಗೆ ವಿದೇಶಗಳಿಂದ ಹೇರಳವಾಗಿ ಹಣ ಬರುತ್ತಿದೆ. ಈ ಹಣದ ಮೂಲಕ ಹಿಂದೂ ಯುವತಿಯರನ್ನು ಗುರಿ ಮಾಡಿ, ಅವರ ದಾರಿ ತಪ್ಪಿಸಿ ಮತಾಂತರ ಮಾಡಲಾಗುತ್ತಿದೆ. ಇದು ಸಂವಿಧಾನ ಬಾಹಿರ. ಸಂವಿಧಾನ ಬಾಹಿರ ಕೃತ್ಯಗಳನ್ನು ತಡೆಯಲು ಮುಂದಾದರೆ ಸಿದ್ದರಾಮಯ್ಯ ಅವರಿಗೆ ಸಂಕಟ ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.

‘ತ್ರಿವಳಿ ತಲಾಖ್‌, ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನದ 370 ವಿಧಿ ರದ್ದು ಮಾಡಿದ್ದು, ಸಿಎಎ ಜಾರಿ, ರಾಮಮಂದಿರ ನಿರ್ಮಾಣ, ಗೋಹತ್ಯೆ ನಿಷೇಧದಂತಹ ಕ್ರಮಗಳನ್ನು ಕಾಂಗ್ರೆಸ್ ವಿರೋಧಿಸುತ್ತದೆ. ಇದಕ್ಕೆ ಮುಖ್ಯಕಾರಣ ಮುಸ್ಲಿಂ ವೋಟ್‌ ಬ್ಯಾಂಕ್‌. ಈಗ ‘ಲವ್‌ ಜಿಹಾದ್‌’ ತಡೆಗೆ ತರುವ ಕಾನೂನು ವಿರೋಧಿಸಲು ಮತ ಬ್ಯಾಂಕ್‌ ರಾಜಕೀಯವೇ ಕಾರಣ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT