ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಂದ್ರೆ ಸ್ಮೃತಿ ಲೇಖನ ಸ್ಪರ್ಧೆ: ರವಿಶಂಕರ್‌ಗೆ ಮೊದಲ ಬಹುಮಾನ

Last Updated 14 ಜನವರಿ 2020, 12:23 IST
ಅಕ್ಷರ ಗಾತ್ರ

ಬೆಂಗಳೂರು: ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಎ.ಕೆ.ರವಿಶಂಕರ ಅವರು ಬೆಂಗಳೂರಿನ ದ.ರಾ.ಬೇಂದ್ರೆ ಕಾವ್ಯ ಕೂಟವು ಪಿಎಚ್.ಡಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ‘ದ.ರಾ.ಬೇಂದ್ರೆ ಸ್ಮೃತಿ ಲೇಖನ ಸ್ಪರ್ಧೆ– 13’ರಲ್ಲಿ ಮೊದಲ ಬಹುಮಾನಕ್ಕೆ ಆಯ್ಕೆಯಾದ್ದಾರೆ.

ಮಂಗಳೂರು ವಿಶ್ವವಿದ್ಯಾಲಯದ ಎಸ್‌ಪಿವಿ ಕನ್ನಡ ಅಧ್ಯಯನ ಸಂಸ್ಥೆಯ ಸಂಶೋಧನಾ ವಿದ್ಯಾರ್ಥಿನಿ ಮೈತ್ರಿ ಭಟ್‌ ಎರಡನೇ ಬಹುಮಾನ, ತುಮಕೂರು ವಿಶ್ವವಿದ್ಯಾಲಯದ ಡಾ.ಡಿ.ವಿ.ಗುಂಡಪ್ಪ ಕನ್ನಡ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಕೆ.ಎಂ.ಗೋವಿಂದರಾಜು ಮೂರನೆಯ ಬಹುಮಾನ, ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಶಭಾನ ಪ್ರೋತ್ಸಾಹಕ ಬಹುಮಾನ ಪಡೆದಿದ್ದಾರೆ.

ಮೊದಲ ಬಹುಮಾನವು ₹ 5ಸಾವಿರ, ಎರಡನೇ ಬಹುಮಾನವು ₹ 4ಸಾವಿರ, ಮೂರನೆಯ ಬಹುಮಾನವು ₹ 3 ಸಾವಿರ ಹಾಗೂ ಪ್ರೊತ್ಸಾಹಕ ಬಹುಮಾನವು ₹ 2 ಸಾವಿರ ನಗದನ್ನು ಒಳಗೊಂಡಿದೆ. ಬೇಂದ್ರೆ ಅವರು ಹುಟ್ಟಿದ ದಿನವಾದ ಜನವರಿ31ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಏರ್ಪಡಿಸಿರುವ ಸಮಾರಂಭದಲ್ಲಿ ಬಹುಮಾನ ವಿತರಿಸಲಾಗುವುದು ಎಂದು ಕೂಟದ ಅಧ್ಯಕ್ಷ ಡಾ.ಜಿ.ಕೃಷ್ಣಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT