ಶನಿವಾರ, ಫೆಬ್ರವರಿ 29, 2020
19 °C

ರಿಸರ್ವ್ ಬ್ಯಾಂಕ್ ಹೆಸರಿನಲ್ಲಿ ₹35 ಲಕ್ಷ ವಂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಿಸರ್ವ್ ಬ್ಯಾಂಕ್ ಹೌಸಿಂಗ್ ಕೋ–ಆಪರೇಟಿವ್ ಸೊಸೈಟಿ’ ಹೆಸರಿನಲ್ಲಿ ನಿವೇಶನ ನೀಡುವುದಾಗಿ ಹೇಳಿ ₹35 ಲಕ್ಷ ಪಡೆದುಕೊಂಡು ವಂಚಿಸಲಾಗಿದ್ದು, ಈ ಸಂಬಂಧ ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ವಂಚನೆ ಸಂಬಂಧ ವೈದ್ಯೆಯೊಬ್ಬರು ದೂರು ನೀಡಿದ್ದಾರೆ. ವಾಣಿಜ್ಯ ತೆರಿಗೆ ಅಧಿಕಾರಿ ಗೌರಿ ಹಾಗೂ ಜಯಂತಿ ಎಂಬುವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಸ್ನೇಹಿತರೊಬ್ಬರ ಮೂಲಕ ಪರಿಚಯವಾಗಿದ್ದ ಆರೋಪಿಗಳು, ₹1.50 ಲಕ್ಷಕ್ಕೆ ದೇವನಹಳ್ಳಿ ಬಳಿ ನಿವೇಶನ ನೀಡುವುದಾಗಿ ಹೇಳಿದ್ದರು. ಅದನ್ನು ನಂಬಿ ವೈದ್ಯೆ ಹಣ ಕೊಟ್ಟಿದ್ದರು. ಪ್ರತಿಯಾಗಿ ಸೊಸೈಟಿ ಹೆಸರಿನ ಪ್ರಮಾಣ ಪತ್ರ ಪಡೆದಿದ್ದರು. ನಂತರ, ಸ್ನೇಹಿತರು ಹಾಗೂ ಸಂಬಂಧಿಕರಿಂದ ಹಣ ಕೊಡಿಸಿ ನಿವೇಶನ ಖರೀದಿಸುವಂತೆ ಮಾಡಿದ್ದರು.’

‘ಇತ್ತೀಚೆಗೆ ಆರೋಪಿಗಳ ಬಗ್ಗೆ ಅನುಮಾನ ಬಂದಿತ್ತು. ರಿಸರ್ವ್ ಬ್ಯಾಂಕ್‌ ಆಫ್‌ ಇಂಡಿಯಾ ಕಚೇರಿಗೆ ಹೋಗಿ ವಿಚಾರಿಸಿದ್ದರು. ತಾವು ಯಾವುದೇ ನಿವೇಶನ ಮಾಡಿಲ್ಲವೆಂದು ಅಧಿಕಾರಿಗಳು ಹೇಳಿದ್ದರು’ ಎಂದು ಪೊಲೀಸರು ವಿವರಿಸಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು