ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ವಿಜಯೋತ್ಸವದ ವೀಕ್ಷಣೆಗೆ ಬಂದಿದ್ದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಲ್ಲಿ 10 ಜನರು ಮೃತಪಟ್ಟಿದ್ದಾರೆ.

15ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಅವರನ್ನು ಬೌರಿಂಗ್ ಹಾಗೂ ಖಾಸಗಿ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
.RCB ಸಂಭ್ರಮಾಚರಣೆಯಲ್ಲಿ ದುರಂತ; ಸಾವಿನ ಸಂಖ್ಯೆ 11ಕ್ಕೆ ಏರಿಕೆ.RCB Victory Parade | ಮೆಟ್ರೊ ನಿಲುಗಡೆ ಸ್ಥಗಿತಗೊಳಿಸಿದ ಬಿಎಂಆರ್ಸಿಎಲ್.
ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಭಾರಿ ಸಂಖ್ಯೆಯಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು ಜಮಾಯಿಸಿದ್ದರಿಂದ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪರದಾಡಿದರು. ಮಧ್ಯಾಹ್ನದ 12ರಿಂದಲೇ ವಿಧಾನಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದತ್ತ ಆರ್ಸಿಬಿ ಅಭಿಮಾನಿಗಳು ಬರಲು ಆರಂಭಿಸಿದ್ದರು. ಇದರಿಂದ ಗೊಂದಲ ವಾತಾವರಣ ನಿರ್ಮಾಣವಾಗಿದೆ. ಪೋಷಕರ ಜತೆಗೆ ಪುಟ್ಟಮಕ್ಕಳು ಕ್ರೀಡಾಂಗಣದತ್ತ ಬಂದಿದ್ದು, ತೊಂದರೆಗೆ ಸಿಲುಕಿದರು.

ವಿಜಯೋತ್ಸವವನ್ನು ದಿಢೀರ್ ನಿರ್ಧಾರ ಮಾಡಿದ್ದರಿಂದ ಭದ್ರತೆಗೆ ಸಿಬ್ಬಂದಿ ನಿಯೋಜನೆಯಲ್ಲಿ ಸಮಸ್ಯೆ ಆಗಿದೆ. ದಿಢೀರ್ ಆಗಿ ದೊಡ್ಡಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದರಿಂದ ನಿಯಂತ್ರಣವು ಸಾಧ್ಯವಾಗದೇ ಪೊಲೀಸರು ಪರದಾಡಿದರು.
.IPL 2025 | ಬೆಂಗಳೂರಿನಲ್ಲಿ ಆರ್ಸಿಬಿ ವಿಕ್ಟರಿ ಪರೇಡ್: ಮಾಹಿತಿ ಇಲ್ಲಿದೆ.IPL 2025: ಆರ್ಸಿಬಿ ತಂಡಕ್ಕೆ ಸನ್ಮಾನ ಮಾಡಲಿರುವ ಸಿಎಂ ಸಿದ್ದರಾಮಯ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.