ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಭಾರಿ ಸಂಖ್ಯೆಯಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು ಜಮಾಯಿಸಿದ್ದು, ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಮಧ್ಯಾಹ್ನದ 12ರಿಂದಲೇ ವಿಧಾನಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದತ್ತ ಆರ್‌ಸಿಬಿ ಅಭಿಮಾನಿಗಳು ಬರಲು ಆರಂಭಿಸಿದ್ದರು. ಇದರಿಂದ ಗೊಂದಲ ವಾತಾವರಣ ನಿರ್ಮಾಣವಾಗಿದೆ. ಪೋಷಕರ ಜತೆಗೆ ಪುಟ್ಟಮಕ್ಕಳು ಕ್ರೀಡಾಂಗಣದತ್ತ ಬಂದಿದ್ದು, ತೊಂದರೆಗೆ ಸಿಲುಕಿದ್ದಾರೆ.