ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಪಿಎಸ್ಐ ನೇಮಕಾತಿಗೆ ಮರು ಪರೀಕ್ಷೆ ಇಂದು

Published 22 ಜನವರಿ 2024, 15:45 IST
Last Updated 22 ಜನವರಿ 2024, 15:45 IST
ಅಕ್ಷರ ಗಾತ್ರ

ಬೆಂಗಳೂರು: ನಗರದ 117 ಪರೀಕ್ಷಾ ಕೇಂದ್ರಗಳಲ್ಲಿ ಮಂಗಳವಾರ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಸಿವಿಲ್ – ಪುರುಷ ಹಾಗೂ ಮಹಿಳಾ) ನೇರ ನೇಮಕಾತಿಗೆ ಮರು ಪರೀಕ್ಷೆ ನಡೆಯಲಿದೆ.

ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ. ‌ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷಾ ಕೇಂದ್ರದ ಬಳಿ ಪೊಲೀಸ್ ಬಂದೋಬಸ್ತ್‌ ಕಲ್ಪಿಸಲಾಗಿದೆ.

ಬೆಳಿಗ್ಗೆ ಪೇಪರ್–1 (50 ಅಂಕ) ಹಾಗೂ ಮಧ್ಯಾಹ್ನ ಪತ್ರಿಕೆ-2ಕ್ಕೆ (150 ಅಂಕ) ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳನ್ನು ಸೂಕ್ತ ತಪಾಸಣೆಗೆ ಒಳಪಡಿಸುವುದರಿಂದ ಬೆಳಿಗ್ಗೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ನೀರಿನ ಬಾಟಲ್, ಮೊಬೈಲ್‌ ನಿಷೇಧಿಸಲಾಗಿದೆ. ಮೊಬೈಲ್‌ನಲ್ಲಿ ಗುರುತಿನ ಚೀಟಿ ತೋರಿಸಲು ಅವಕಾಶ ಇರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT