ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

26ರಂದು ಕಡ್ಡಾಯ ‘ಸಂವಿಧಾನದ ಪೀಠಿಕೆ’ ಓದು

Last Updated 21 ನವೆಂಬರ್ 2022, 16:27 IST
ಅಕ್ಷರ ಗಾತ್ರ

ಬೆಂಗಳೂರು: ಭಾರತ ಸಂವಿಧಾನದ ದಿನವಾದ ನ.26ರಂದು ಬೆಳಿಗ್ಗೆ 11ಕ್ಕೆ ಎಲ್ಲ ವಿದ್ಯಾರ್ಥಿಗಳು ಏಕಕಾಲಕ್ಕೆ ಸಂವಿಧಾನದ ಪೀಠಿಕೆ ಓದಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿದೆ.

ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಿದ ಮೌಲ್ಯಗಳು, ತತ್ವಗಳ ಅರಿವು ಮೂಡಿಸಲು ಇಲಾಖೆ ‘ನಿಮ್ಮ ಸಂವಿಧಾನ ಗೊತ್ತೇ’ ಕಾರ್ಯಕ್ರಮವನ್ನು ರೂಪಿಸಿದೆ. ಅದರ ಭಾಗವಾಗಿ ಎಲ್ಲ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಓದಿಸಬೇಕು. ಶಾಲಾ ಆವರಣದಲ್ಲಿ ಪೀಠಿಕೆ ಹಾಗೂ ಮೂಲಭೂತ ಕರ್ತವ್ಯಗಳ ವಿವರಗಳನ್ನು ಪ್ರದರ್ಶಿಸಬೇಕು. ಸಂವಿಧಾನದ ವಿವಿಧ ಅಂಶಗಳ ಕುರಿತು ಚರ್ಚಾ ಸ್ಪರ್ಧೆ, ರಸಪ್ರಶ್ನೆ, ಪ್ರಬಂಧಗಳನ್ನು ಹಮ್ಮಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT