ಶುಕ್ರವಾರ, ಜೂನ್ 18, 2021
24 °C

ಜುಲೈ 30, 31ಕ್ಕೆ ಸಿಇಟಿ ನಡೆಸಲು ಸಿದ್ಧ: ಡಿಸಿಎಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜುಲೈ 30 ಮತ್ತು 31ರಂದು ಸಿಇಟಿ ನಡೆಸಲು ಸಿದ್ಧವಿರುವುದಾಗಿ ಹೈಕೋರ್ಟ್‌ಗೆ ತಿಳಿಸಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಹೈಕೋರ್ಟ್‌ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು, ಆರೋಗ್ಯ, ಸಾರಿಗೆ ಮತ್ತು ಪೊಲೀಸ್ ಅಧಿಕಾರಿಗಳ ಜತೆ ತುರ್ತು ವಿಡಿಯೊ ಸಂವಾದ ನಡೆಸಿದ ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ, ಪರೀಕ್ಷೆ ನಡೆಸಲು ಎಲ್ಲರೂ ತಯಾರಿ ಆಗಿರುವುದನ್ನು ಖಾತರಿಪಡಿಸಿಕೊಂಡರು.

‘ಬುಧವಾರ ಈ ವಿಷಯನ್ನು ಹೈಕೋರ್ಟ್ ಗಮನಕ್ಕೆ ತರಲಾಗುವುದು. ಅಂತಿಮವಾಗಿ ಹೈಕೋರ್ಟ್ ಸೂಚನೆ ಪ್ರಕಾರ ನಿರ್ಧರಿಸಲಾಗುವುದು’ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು