ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾ.4ಕ್ಕೆ ಅನುದಾನಿತ ಶಾಲಾ–ಕಾಲೇಜುಗಳು ಬಂದ್

Last Updated 26 ಫೆಬ್ರುವರಿ 2022, 18:00 IST
ಅಕ್ಷರ ಗಾತ್ರ

ಬೆಂಗಳೂರು: ‘ಅನುದಾನಿತ ಶಾಲಾ ಕಾಲೇಜುಗಳ ನೌಕರರಿಗೆ ಪಿಂಚಣಿ ಸೌಲಭ್ಯ ಒದಗಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್‌ 4ರಂದು ರಾಜ್ಯದಾದ್ಯಂತ ಅನುದಾನಿತ ಶಾಲಾ ಕಾಲೇಜುಗಳನ್ನು ಬಂದ್‌ ಮಾಡಲಿದ್ದೇವೆ. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಿಂದ ವಿಧಾನಸೌಧ ಚಲೋ ನಡೆಸಲಾಗುವುದು’ ಎಂದು ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘ ತಿಳಿಸಿದೆ.

ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಡಿ.ಸಿ.ಗೋಪಿನಾಥ್, ‘2006ಕ್ಕೂ ಮೊದಲು ನೇಮಕವಾಗಿ ನಂತರ ಅನುದಾನಕ್ಕೊಳಪಟ್ಟ ಶಾಲಾ– ಕಾಲೇಜುಗಳಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ನಿವೃತ್ತ ನೌಕಕರ ಸೇವಾ ಅವಧಿ ಪರಿಗಣಿಸಿ, ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯ ನೀಡಬೇಕು’ ಎಂದು ಆಗ್ರಹಿಸಿದರು.

‘2006ರ ನಂತರ ನೇಮಕವಾದ ನೌಕರರಿಗೂ ಸರ್ಕಾರಿ ನೌಕರರಂತೆ ನೂತನ ಪಿಂಚಣಿ ಯೋಜನೆಯನ್ನು ಯಥಾವತ್ತಾಗಿ ನೀಡಬೇಕು. ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ವಿಧಿಸಿರುವ ನಿಯಮಗಳನ್ನು ಸಡಿಲಗೊಳಿಸಬೇಕು. ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ನೀಡಬೇಕು ಹಾಗೂ ಮಾನ್ಯತೆ ನವೀಕರಣ ಪ್ರಕ್ರಿಯೆಯನ್ನು ಸರಳಗೊಳಿಸಬೇಕು’ ಎಂದೂ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT