ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ಲಕ್ಷ ದಾಟಿದ ಕೋವಿಡ್ ಗುಣಮುಖರ ಸಂಖ್ಯೆ

Last Updated 5 ಸೆಪ್ಟೆಂಬರ್ 2020, 18:43 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರಲ್ಲಿ 3,226 ಮಂದಿ ಶನಿವಾರ ಗುಣಮುಖರಾಗಿದ್ದಾರೆ. ಇದರೊಂದಿಗೆ ಈವರೆಗೆ ಚೇತರಿಸಿಕೊಂಡವರ ಒಟ್ಟು ಸಂಖ್ಯೆ ಲಕ್ಷದ ಗಡಿ ದಾಟಿದೆ.‌

ವರದಿಯಾದ ಒಟ್ಟು ಪ್ರಕರಣಗಳಲ್ಲಿ ಶೇ 70 ರಷ್ಟು ಮಂದಿ ಗುಣಮುಖರಾಗಿದ್ದಾರೆ. ನಗರದಲ್ಲಿ ಜೂನ್ ಅಂತ್ಯಕ್ಕೆ 543 ಮಂದಿ ಚೇತರಿಸಿಕೊಂಡಿದ್ದರು. ಜುಲೈ ಅಂತ್ಯಕ್ಕೆ ಈ ಸಂಖ್ಯೆ 16 ಸಾವಿರ ದಾಟಿತ್ತು.ಆಗಸ್ಟ್‌ ಒಂದೇ ತಿಂಗಳಲ್ಲಿ 73,147 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 2,359 ಮಂದಿ ಗುಣಮುಖರಾಗಿದ್ದಾರೆ. ಈ ತಿಂಗಳ ಐದು ದಿನಗಳ ಅವಧಿಯಲ್ಲಿ 11,109 ಮಂದಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.ಸದ್ಯ41ಸಾವಿರಕ್ಕೂ ಅಧಿಕ ಸೋಂಕಿತರು ಆಸ್ಪತ್ರೆಗಳು, ಕೋವಿಡ್ ಆರೈಕೆ ಕೇಂದ್ರಗಳು ಹಾಗೂ ಮನೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ನಗರದಲ್ಲಿ ಹೊಸದಾಗಿ 3,093 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1.44 ಲಕ್ಷ ದಾಟಿದೆ.ಕೋವಿಡ್ ಪೀಡಿತರಲ್ಲಿ ಮತ್ತೆ 34 ಮಂದಿ ಮೃತಪಟ್ಟಿದ್ದಾರೆ. ಕೋವಿಡ್‌ನಿಂದ ಸತ್ತವರ ಒಟ್ಟು ಸಂಖ್ಯೆ 2,125ಕ್ಕೆ ಏರಿಕೆಯಾಗಿದೆ. ಮರಣ ಪ್ರಮಾಣ ದರ ಶೇ 1.48ಕ್ಕೆ ಇಳಿಕೆಯಾಗಿದೆ. ಸದ್ಯ 275 ಮಂದಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ.

ನಗರದಲ್ಲಿ ಪರೀಕ್ಷೆ ಒಳಪಟ್ಟವರಲ್ಲಿ ಸೋಂಕು ದೃಢಪಡುವ ಪ್ರಮಾಣ ಶೇ 14.48 ರಷ್ಟಿದೆ.ಹತ್ತು ದಿನಗಳಲ್ಲಿ ವರದಿಯಾದ ಒಟ್ಟು ಪ್ರಕರಣಗಳಲ್ಲಿ ಶೇ 21ರಷ್ಟು ಪ್ರಕರಣಗಳು ಪಶ್ಚಿಮ ವಲಯಕ್ಕೆ ಸೇರಿವೆ. ದಕ್ಷಿಣ ವಲಯದಲ್ಲಿ ಶೇ 18 ರಷ್ಟು ಹಾಗೂ ಪೂರ್ವ ವಲಯದಲ್ಲಿ ಶೇ 17 ರಷ್ಟು ಪ್ರಕರಣಗಳು ವರದಿಯಾಗಿವೆ. ಬೊಮ್ಮನಹಳ್ಳಿ ವಲಯದಲ್ಲಿ ಶೇ 12 ರಷ್ಟು ಪ್ರಕರಣಗಳು ಬೆಳಕಿಗೆಬಂದಿವೆ. ನಗರದ ಜ್ವರ ಚಿಕಿತ್ಸಾಲಯಗಳಲ್ಲಿ ಒಂದೇ ದಿನ 4,114 ಮಂದಿಯನ್ನು ತಪಾಸಣೆ ಮಾಡಲಾಗಿದೆ. ಈವರೆಗೆ ಅಲ್ಲಿ ಪರೀಕ್ಷೆಗೆ ಒಳಪಟ್ಟವರ ಒಟ್ಟು ಸಂಖ್ಯೆ 2 ಲಕ್ಷದ ಗಡಿ ಸಮೀಪಿಸಿದೆ.

ನಗರದ ಕೋವಿಡ್ ಪ್ರಕರಣಗಳ ಅಂಕಿ–ಅಂಶ

ಒಟ್ಟು ಪ್ರಕರಣಗಳು- 1,44,757

ಗುಣಮುಖರಾದವರು- 1,01,152

ಸಕ್ರಿಯ ಪ್ರಕರಣಗಳು- 41,479

ಮೃತಪಟ್ಟವರು- 2,125

ಈ ದಿನದ ಏರಿಕೆ- 3,093

ಗುಣಮುಖರು- 3,226

ಮೃತಪಟ್ಟವರು- 34

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT