ಭಾನುವಾರ, ಅಕ್ಟೋಬರ್ 17, 2021
23 °C
ಸಮುದಾಯದ ಪ್ರಮುಖರಿಗೆ ಅಭಿನಂದನಾ ಸಮಾರಂಭ

ಬಿಜೆಪಿ ಸರ್ಕಾರದಲ್ಲಿ ರೆಡ್ಡಿ ಶಾಸಕರಿಗೆ ಅನ್ಯಾಯ: ರಾಮಲಿಂಗಾರೆಡ್ಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆ.ಆರ್.ಪುರ: ‘ಬಿಜೆಪಿ ಸರ್ಕಾರದಲ್ಲಿ ರೆಡ್ಡಿ ಸಮುದಾಯದ ಒಬ್ಬ ಶಾಸಕರಿಗೂ ಸಚಿವ ಸ್ಥಾನ ನೀಡದೆ, ಅನ್ಯಾಯ ಮಾಡಲಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು.

ಮಾರತ್ತಹಳ್ಳಿಯಲ್ಲಿ ಬೆಂಗಳೂರು ಪೂರ್ವ ತಾಲ್ಲೂಕು ರೆಡ್ಡಿ ಸಮುದಾಯದ ವತಿಯಿಂದ ಹಮ್ಮಿಕೊಂಡಿದ್ದ ಸಮುದಾಯದ ಪ್ರಮುಖರಿಗೆ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾ
ಡಿದರು.

‘ರೆಡ್ಡಿ ಸಮುದಾಯದ ಶಾಸಕರಿಗೆ ಅರ್ಹತೆ ಇದ್ದರೂ ಸಚಿವ ಸ್ಥಾನ ನೀಡದೆ, ನಿರ್ಲಕ್ಷ್ಯ ತೋರಿರುವುದರಿಂದ ಸಮುದಾಯದ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಪಕ್ಷಬೇದ ಮರೆತು ಸಮುದಾಯದ ಏಳಿಗೆಗೆ ಶ್ರಮಿಸಬೇಕು’ ಎಂದರು.

‘ರೆಡ್ಡಿ ಸಮುದಾಯದಲ್ಲಿ ಒಗ್ಗಟ್ಟು ಬರುವವರೆಗೂ ರಾಜಕೀಯ ಪ್ರಾತಿನಿಧ್ಯ ಸಿಗದೆ, ನಮ್ಮ ಕೂಗು ಸರ್ಕಾರಕ್ಕೆ ಕೇಳಿಸುವುದಿಲ್ಲ. ಬೀದರ್‌
ನಿಂದ ಬೆಂಗಳೂರುವರೆಗೆ ರೆಡ್ಡಿ ಸಮುದಾಯದ ಜನರಿದ್ದಾರೆ. ರೆಡ್ಡಿ ಸಮುದಾಯವನ್ನು ಒಗ್ಗೂಡಿಸುವ ಕೆಲಸ ಮಾಡಬೇಕಿದೆ’ ಎಂದು ಹೇಳಿದರು.

ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ, ‘ಹಿಂದಿನ ಬಿಬಿಎಂಪಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಮೀಸಲಾತಿ ನೀಡದೆ ಸಮುದಾಯಕ್ಕೆ ವಂಚಿಸಿವೆ. ಮುಂದಿನ ದಿನಗಳಲ್ಲಿ ರೆಡ್ಡಿ ಸಮುದಾಯ ರಾಜಕೀಯವಾಗಿ ಬೆಳೆಯಲು ಶ್ರಮಿಸುತ್ತೇವೆ’ ಎಂದರು.

ರೆಡ್ಡಿ ಸಮುದಾಯದ ರಾಮಲಿಂಗಾರೆಡ್ಡಿ, ಟಿಟಿಡಿ ಸದಸ್ಯ ಎಸ್.ಆರ್.ವಿಶ್ವನಾಥ್, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಕೆಎಎಸ್ ಅಧಿಕಾರಿ ವರಪ್ರಸಾದ್ ರೆಡ್ಡಿ, ವೈದ್ಯ ಡಾ.ವಿಜಯಕುಮಾರ್, ಡಾ.ಶಶಿಧರ್, ಮಾರ್ಷಲ್ ಆರ್ಟ್ ಚಿನ್ನದ ಪದಕ ವಿಜೇತ ಸಂತೋಷ್ ರೆಡ್ಡಿ ಅವರನ್ನು ಸನ್ಮಾನಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು