ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುರಕ್ಷಿತ ನೋಂದಣಿ ಫಲಕ: ಆನ್‌ಲೈನ್‌ನಲ್ಲೇ ನೋಂದಣಿ

Published 15 ಸೆಪ್ಟೆಂಬರ್ 2023, 16:28 IST
Last Updated 15 ಸೆಪ್ಟೆಂಬರ್ 2023, 16:28 IST
ಅಕ್ಷರ ಗಾತ್ರ

ಬೆಂಗಳೂರು: ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಎಚ್‌ಎಸ್‌ಆರ್‌ಪಿ) ಆಳವಡಿಸಿಕೊಳ್ಳಲು ಆನ್‌ಲೈನ್‌ ಮೂಲಕ ನೋಂದಣಿ ಮಾಡಬಹುದು ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತ ಎ.ಎಂ. ಯೋಗೀಶ್‌ ತಿಳಿಸಿದ್ದಾರೆ.

http//transport.karnataka.gov.in ಅಥವಾ www.siam.inಗೆ ಭೇಟಿ ನೀಡಬೇಕು. ಅದರಲ್ಲಿ ಬುಕ್‌ ಎಚ್‌ಎಸ್ಆರ್‌ಪಿಯನ್ನು ಆಯ್ಕೆ ಮಾಡಿಕೊಳ್ಳಬೇಕು. ಬಳಿಕ ನಿಮ್ಮ ವಾಹನ ತಯಾರಕ ಕಂಪನಿಯನ್ನು ಆಯ್ಕೆ ಮಾಡಬೇಕು. ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಬೇಕು. ಎಚ್ಎಸ್‌ಆರ್‌ಪಿ ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್‌ ಸ್ಥಳವನ್ನು ಆಯ್ಕೆ ಮಾಡಿಕೊಳ್ಳಬೇಕು. ಶುಲ್ಕವನ್ನು ಆನ್‌ಲೈನ್‌ ಮೂಲಕವೇ ಪಾವತಿಸಬೇಕು. ನಗದು ರೂಪದಲ್ಲಿ ಪಾವತಿ ಮಾಡುವಂತಿಲ್ಲ. ವಾಹನ ಮಾಲೀಕರ ಮೊಬೈಲ್‌ ಸಂಖ್ಯೆಗೆ ಒಟಿಪಿ ಬರುತ್ತದೆ. ಎಚ್‌ಎಸ್‌ಆರ್‌ಪಿ ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಿಕೊಳ್ಳಬಹುದು. ನಿಗದಿಪಡಿಸಿದ ಸಮಯಕ್ಕೆ ವಾಹನ ತಯಾರಕರು ಅಥವಾ ಡೀಲರ್‌ ಸಂಸ್ಥೆಗೆ ಭೇಟಿ ನೀಡಬೇಕು. ವಾಹನ ಮಾಲೀಕರ ಕಚೇರಿ ಆವರಣ ಅಥವಾ ಮನೆಯ ಸ್ಥಳದಲ್ಲಿ ಎಚ್‌ಎಸ್‌ಆರ್‌ಪಿ ಅಳವಡಿಕೆಯ ಆಯ್ಕೆಗೂ ಅವಕಾಶವಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಾರುಕಟ್ಟೆಯಲ್ಲಿ ರಸ್ತೆ ಬದಿಯ ಮಾರಾಟಗಾರರಿಂದ ನಕಲಿ ಹಾಲೊಗ್ರಾಮ್‌, ಐಎನ್‌ಡಿ ಮಾರ್ಕ್‌, ಇಂಡಿಯಾ ಎಂದು ಬರೆದಿರುವ ನಂಬರ್‌ ಪ್ಲೇಟ್‌ ಅಳವಡಿಸುವಂತಿಲ್ಲ. ಅವು ಎಚ್‌ಎಸ್‌ಆರ್‌‍ಪಿಗಳಾಗಿರುವುದಿಲ್ಲ. ಅಸಲಿ ಎಚ್‌ಎಸ್‌ಆರ್‌ಪಿ ಅಳವಡಿಸದೇ ಇದ್ದರೆ ವಾಹನ ಮಾಲೀಕತ್ವ ವರ್ಗಾವಣೆ, ವಿಳಾಸ ಬದಲಾವಣೆ, ಕಂತು ಕರಾರು ನಮೂದು/ರದ್ದತಿ, ಅರ್ಹತಾ ಪತ್ರ ನವೀಕರಣ ಮಾಡಲಾಗುವುದಿಲ್ಲ. 2019 ಏಪ್ರಿಲ್‌ 1ಕ್ಕಿಂತ ಹಿಂದಿನ ವಾಹನಗಳು ನವೆಂಬರ್‌ 17ರ ಒಳಗೆ ಎಚ್‌ಎಸ್‌ಆರ್‌ಪಿ ಅಳವಡಿಸಬೇಕು. ಶುಲ್ಕ ಪಾವತಿಸಿದ ಪ್ರಕರಣಗಳಲ್ಲಿ ನಿಗದಿತ ದಿನಾಂಕದಿಂದ 30 ದಿನಗಳವರೆಗೆ ಎಚ್‌ಎಸ್ಆರ್‌ಪಿ ರಸೀದಿಯನ್ನು ಪ್ರಸ್ತುತಪಡಿಸುವ ವಾಹನಗಳಿಗೆ ಯಾವುದೇ ದಂಡ ಇರುವುದಿಲ್ಲ ಎಂದು ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT