ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆಲ್ಯೂಟ್ ಬದಲು ದಟ್ಟಣೆ ತಡೆಯಿರಿ; ಡಿ.ರೂಪಾ ಟ್ವೀಟ್

Last Updated 11 ನವೆಂಬರ್ 2020, 0:07 IST
ಅಕ್ಷರ ಗಾತ್ರ

ಬೆಂಗಳೂರು: ಲಾಕ್‌ಡೌನ್‌ ತೆರವಾದ ನಂತರ ವಾಹನಗಳ ದಟ್ಟಣೆ ಹೆಚ್ಚಾಗಿದೆ. ದಟ್ಟಣೆ ನಿಯಂತ್ರಣಕ್ಕಾಗಿ ಕರ್ತವ್ಯ ನಿರತ ಕಾನ್‌ಸ್ಟೆಬಲ್‌ಗಳು, ರಸ್ತೆಯಲ್ಲಿ ಹಾದುಹೋಗುವ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೆಲ್ಯೂಟ್ ಮಾಡುವುದರಲ್ಲೇ ಸಮಯ ವ್ಯರ್ಥ ಮಾಡುತ್ತಿದ್ದಾರೆ. ಸೆಲ್ಯೂಟ್ ಮಾಡುವ ಬದಲು ದಟ್ಟಣೆ ತಡೆಯಲು ಒತ್ತು ನೀಡುವಂತೆ ಗೃಹ ಇಲಾಖೆ ಕಾರ್ಯದರ್ಶಿ ಡಿ. ರೂಪಾ ಟ್ವೀಟ್ ಮಾಡಿದ್ದಾರೆ.

‘ನಗರದಲ್ಲಿ ಸಂಚಾರ ದಟ್ಟಣೆ ಇದ್ದಾಗಲೇ ಕೆಲ ಪೊಲೀಸರು, ಹಿರಿಯ ಅಧಿಕಾರಿಗಳಿಗೆ ಗೌರವ ಸಲ್ಲಿಸಲು ಸೆಲ್ಯೂಟ್ ಮಾಡಿ ಕಾಲಹರಣ ಮಾಡುತ್ತಿದ್ದಾರೆ. ಅದರ ಬದಲು ಸಂಚಾರ ದಟ್ಟಣೆ ತಡೆಗಟ್ಟಲು ಹೆಚ್ಚಿನ ಗಮನಹರಿಸಬೇಕು. ಈ ಬಗ್ಗೆ ಕಾನ್‌ಸ್ಟೆಬಲ್‌ಗಳಿಗೆ ಸೂಚನೆ ನೀಡಬೇಕು’ ಎಂದು ಟ್ವೀಟ್‌ನಲ್ಲಿ ರೂಪಾ ತಿಳಿಸಿದ್ದಾರೆ.

ಇದೇ ಟ್ವೀಟ್‌ ಅನ್ನು ಸಂಚಾರ ವಿಭಾಗದ ಜಂಟಿ ಕಮಿಷನರ್ ಬಿ.ಆರ್. ರವಿಕಾಂತೇಗೌಡ ಹಾಗೂ ಬೆಂಗಳೂರು ಸಂಚಾರ ಪೊಲೀಸ್‌ ಟ್ವೀಟರ್ ಖಾತೆಗಳಿಗೆ ಟ್ಯಾಗ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT