ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಎಸ್‌ಆರ್‌ಟಿಸಿ ನೌಕರರ ಅಂತರ ನಿಗಮ ವರ್ಗಾವಣೆ ಪಟ್ಟಿ ಬಿಡುಗಡೆ

Published 6 ಜುಲೈ 2024, 16:16 IST
Last Updated 6 ಜುಲೈ 2024, 16:16 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಅಂತರ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದ ನೌಕರರ ವರ್ಗಾವಣೆ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ, ಕೆಕೆಆರ್‌ಟಿಸಿಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆಗೆ ಅರ್ಜಿ ಸಲ್ಲಿಸಲು ಕಳೆದ ವರ್ಷ ಜುಲೈಯಿಂದ ಡಿಸೆಂಬರ್‌ವರೆಗೆ ಅವಕಾಶ ನೀಡಲಾಗಿತ್ತು. ಪರಸ್ಪರ 958 ನೌಕರರು ಅರ್ಜಿ ಸಲ್ಲಿಸಿದ್ದರು. ಈ ಪೈಕಿ 616 ನೌಕರರನ್ನು ಪರಸ್ಪರ ವರ್ಗಾವಣೆ ಮಾಡಲಾಗಿದ್ದು, ಅದರ ಆದೇಶವನ್ನು ksrtc.karnataka.gov.in ವೆಬ್‌ಸೈಟ್‌ನಲ್ಲಿ ಶನಿವಾರ ಪ್ರಕಟಿಸಲಾಗಿದೆ.

ಆಕ್ಷೇಪಗಳು ಇದ್ದಲ್ಲಿ ಜುಲೈ 10ರ ಒಳಗೆ ಸಲ್ಲಿಸಲು ಅವಕಾಶ ನೀಡಲಾಗಿದೆ ಆಕ್ಷೇಪಣೆಗಳನ್ನು ಸಂಬಂಧಪಟ್ಟ ವಿಭಾಗದ ಆಡಳಿತಾಧಿಕಾರಿಗಳಿಗೆ ಸಲ್ಲಿಸಿ ಸ್ವೀಕೃತಿ ಪಡೆಯಬೇಕು ಎಂದು  ಕೆಎಸ್‌ಆರ್‌ಟಿಸಿ ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ) ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT