ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಕೀಲರ ಕ್ಲರ್ಕ್‌ಗಳ ಆರ್ಥಿಕ ಸಂಕಷ್ಟ: ಸಭೆಗೆ ಹೈಕೋರ್ಟ್ ಸೂಚನೆ

Last Updated 23 ಮೇ 2020, 19:29 IST
ಅಕ್ಷರ ಗಾತ್ರ

ಬೆಂಗಳೂರು: 'ನೋಂದಾಯಿತ ವಕೀಲರ ಕ್ಲರ್ಕ್‍ಗಳಿಗೆ ನೆರವು ನೀಡುವ ದಿಸೆಯಲ್ಲಿ ಯೋಜನೆ ರೂಪಿಸಲು, ಬೆಂಗಳೂರು ವಕೀಲರ ಸಂಘ ಹಾಗೂ ರಾಜ್ಯ ವಕೀಲರ ಕ್ಲರ್ಕ್‌ಗಳ ಸಂಘದ ಜಂಟಿ ಸಭೆ ಏರ್ಪಡಿಸಿ' ಎಂದು ರಾಜ್ಯ ವಕೀಲರ ಪರಿಷತ್‍ಗೆ ಹೈಕೋರ್ಟ್ ಸೂಚಿಸಿದೆ.

ಈ ಕುರಿತಂತೆ, 'ಕರ್ನಾಟಕ ರಾಜ್ಯ ವಕೀಲರ ಕ್ಲರ್ಕ್‌ಗಳ ಸಂಘ' ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, 'ತನ್ನ ಸದಸ್ಯರಿಗೆ ಆರ್ಥಿಕ ನೆರವು ನೀಡಲು ಕ್ಲರ್ಕ್‌ಗಳ ಸಂಘವೇ ನಿಧಿ ಸ್ಥಾಪಿಸಬೇಕು' ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.

'ಇದಕ್ಕಾಗಿ ಹಿರಿಯ ವಕೀಲರಿಂದ ಆರ್ಥಿಕ ನೆರವು ಪಡೆಯಬಹುದು. ನಿಧಿ ಸಂಗ್ರಹಿಸಲು ರಾಜ್ಯ ವಕೀಲರ ಪರಿಷತ್ ಹಾಗೂ ಬೆಂಗಳೂರು ವಕೀಲರ ಸಂಘ ಅಗತ್ಯ ಸಹಕಾರ ನೀಡುವ ಬಗ್ಗೆ ಹೈಕೋರ್ಟ್‌ಗೆ ಸಂಪೂರ್ಣ ನಂಬಿಕೆ ಇದೆ' ಎಂದು ನ್ಯಾಯಪೀಠ ಹೇಳಿದೆ.

'ಬೆಂಗಳೂರು ವಕೀಲರ ಸಂಘವನ್ನೂ ಪ್ರತಿವಾದಿಯನ್ನಾಗಿ ಸೇರ್ಪಡೆ ಮಾಡಿ' ಎಂದು ಅರ್ಜಿದಾರರಿಗೆ ಸೂಚಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.

'ಲಾಕ್ ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಕ್ಲರ್ಕ್‌ಗಳಿಗೆ ನೆರವು ನೀಡಲು ₹ 5 ಕೋಟಿ ಮೊತ್ತದ ಸಂಗ್ರಹ ನಿಧಿ ಸ್ಥಾಪಿಸಲು ನಿರ್ದೇಶಿಸಬೇಕು' ಎಂಬುದು ಅರ್ಜಿದಾರರ ಕೋರಿಕೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT