ಮಂಗಳವಾರ, ಜೂನ್ 15, 2021
25 °C

ರೆಮ್‌ಡಿಸಿವಿರ್ ದುಬಾರಿ ಬೆಲೆಗೆ ಮಾರಾಟ: ಫೋರ್ಟಿಸ್ ಆಸ್ಪತ್ರೆ ಶುಶ್ರೂಷಕ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರೆಮ್‌ಡಿಸಿವಿರ್ ಚುಚ್ಚುಮದ್ದುನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಸಿಸಿಬಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

‘ಫೋರ್ಟಿಸ್ ಆಸ್ಪತ್ರೆಯ ಶುಶ್ರೂಷಕ ಸಂತೋಷ್ ಹಾಗೂ ಖಾಸಗಿ ಆಂಬುಲೆನ್ಸ್ ಚಾಲಕ ಸುನೀಲ್ ಬಂಧಿತರು. ಇಬ್ಬರಿಂದಲೂ ರೆಮ್‌ಡಿಸಿವಿರ್ ಚುಚ್ಚುಮದ್ದಿನ 8 ಬಾಟಲಿಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

ಚುಚ್ಚುಮದ್ದು ಅಕ್ರಮವಾಗಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ಬಂದಿತ್ತು. ಅದನ್ನು ಆಧರಿಸಿ ಬಸವೇಶ್ವರನಗರದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಪುರಾವೆ ಸಮೇತ ಬಂಧಿಸಲಾಗಿದೆ.

‘ಸಂತೋಷ್, ಫೋರ್ಟಿಸ್ ಆಸ್ಪತ್ರೆಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದ. ಕೊರೊನಾ ಸೋಂಕಿತರ ಸಂಬಂಧಿಕರನ್ನು ಸಂಪರ್ಕಿಸಿ ಚುಚ್ಚುಮದ್ದು ಮಾರುತ್ತಿದ್ದ. ಇನ್ನೊಬ್ಬ ಆರೋಪಿ ಸುನೀಲ್ ಸಹ ಚುಚ್ಚುಮದ್ದು ಮಾರಾಟದಲ್ಲಿ ನಿರತನಾಗಿದ್ದ’ ಎಂದು ಪೊಲೀಸರು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು