ಬೆಂಗಳೂರು: ಖ್ಯಾತ ಆಹಾರ ತಜ್ಞ, ಚಿಂತಕ ಕೆ.ಸಿ.ರಘು ಅವರು ಅಲ್ಪಕಾಲದ ಅನಾರೋಗ್ಯದಿಂದ ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ.

‘ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನನ್ನ ಪತಿ ಕೆ.ಸಿ.ರಘು ಅವರು ಭಾನುವಾರ ಬೆಳಿಗ್ಗೆ 7.30 ಕ್ಕೆ ನಿಧನರಾಗಿದ್ದಾರೆ. ಅಂತಿಮ ದರ್ಶನ ಮಾಡಲು ಇಚ್ಛಿಸುವವರು ಈ ಕೆಳಗಿನ ವಿಳಾಸಕ್ಕೆ ಬರಬಹುದು.

ಎ-40, 4ನೇ ಮಹಡಿ, ಬ್ರಿಗೇಡ್ ಕಲಾಡಿಯಂ (Brigade Caladium) ದಾಸರಹಳ್ಳಿ ಮೇನ್ ರೋಡ್, ಅಮೃತನಗರ, ದಾಸರಹಳ್ಳಿ, ಬೆಂಗಳೂರು - 560024. Mob- 98800 09140 ' ಎಂದು ಅವರ ಪತ್ನಿ ಆಶಾ ರಘು, ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.

ಕೆ.ಸಿ. ರಘು ಅವರು ಹಲವು ವರ್ಷಗಳ ಕಾಲ ಫುಡ್ ಅಂಡ್ ನ್ಯೂಟ್ರೇಷನ್ ವರ್ಲ್ಡ್ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದರು. ಅನೇಕ ದಿನಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆಯುತ್ತಿದ್ದರು. ಸಾಮಾನ್ಯ ವಿಜ್ಞಾನ ಮತ್ತು ಆರ್ಥಿಕತೆಯ ವಿಷಯಗಳನ್ನು ಅತಿಥಿ ಉಪನ್ಯಾಸಕರಾಗಿ ನಿರ್ವಹಿಸಿದ್ದಾರೆ.

ಅವರು ಸ್ಥಾಪಿಸಿದ ಪ್ರಿಸ್ಟೀನ್ ಆರ್ಗ್ಯಾನಿಕ್ಸ್ ಎಂಬ ಸಂಸ್ಥೆಯಲ್ಲಿ ನವಜಾತ ಶಿಶುಗಳಲ್ಲಿ ಕಂಡುಬರುವ ಮಾರಕ ಕಾಯಿಲೆಗಳಿಗೆ ಪೌಷ್ಟಿಕಾಂಶದ ಪರಿಹಾರ ವನ್ನು ಸಂಶೋಧನೆಯಿಂದ ಕಂಡುಹಿಡಿದು, ದೇಶಾದ್ಯಂತ ಹಾಗೂ ವಿದೇಶಕ್ಕೂ ಒದಗಿಸು ತ್ತಿದ್ದರು. ಈ ಕಾರ್ಯದಿಂದ ಸುಮಾರು 5 ಸಾವಿರ ನವಜಾತ ಶಿಶುಗಳನ್ನು ಸಾವಿನ ದವಡೆಯಿಂದ ಪಾರು ಮಾಡಲಾಗಿತ್ತು.

ರಘು ಅವರಿಗೆ ಅನೇಕ ವಿಷಯಗಳಲ್ಲಿ ಆಳವಾದ ಜ್ಞಾನವಿತ್ತು. ಹೊಸ ವಿಷಯಗಳನ್ನು ಹುಡುಕುತ್ತಾ ಸದಾ ಅಧ್ಯಯನದಲ್ಲಿ ತೊಡಗಿಸಿಕೊಂಡಿದ್ದರು. ಅಧ್ಯಯನಕ್ಕಾಗಿಯೇ ಒಂದು ಬೃಹತ್ ಲೈಬ್ರರಿಯನ್ನೇ ತೆರೆದಿದ್ದರು. ಅಧ್ಯಯನದ ಜೊತೆಗೆ 'ತುತ್ತು ತತ್ವ', 'ಆಹಾರ ರಾಜಕೀಯ', 'ರಸ ತತ್ವ' ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.