ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಹೊಂದಿದ್ದ ಪಿಸ್ತೂಲ್ ಪರವಾನಗಿಯನ್ನು ಪೊಲೀಸರು ತಾತ್ಕಾಲಿಕವಾಗಿ ರದ್ದುಗೊಳಿಸಿದ್ದಾರೆ.

ಪಿಸ್ತೂಲ್ ಪರವಾನಗಿ ರದ್ದುಗೊಳಿಸುವ ಸಂಬಂಧ ದರ್ಶನ್ಗೆ ಜನವರಿ ಮೊದಲ ವಾರದಲ್ಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಇದಕ್ಕೆ ದರ್ಶನ್ ಉತ್ತರಿಸಿದ್ದರು.

‘ನನಗೆ ಪಿಸ್ತೂಲ್ ಪರವಾನಗಿ ಅಗತ್ಯವಿದೆ. ನಾನು ಸೆಲೆಬ್ರಿಟಿಯಾಗಿದ್ದು, ಹೋದ ಸ್ಥಳಗಳಲ್ಲಿ ಹೆಚ್ಚಿನ ಜನ ಸೇರುತ್ತಾರೆ. ನನ್ನ ಆತ್ಮರಕ್ಷಣೆ ಬಹಳ ಮುಖ್ಯವಾಗಿದೆ. ಖಾಸಗಿ ಭದ್ರತಾ ಸಿಬ್ಬಂದಿ ನೇಮಿಸಿಕೊಂಡಿದ್ದರೂ ವೈಯಕ್ತಿಕ ರಕ್ಷಣೆಗಾಗಿ ಪಿಸ್ತೂಲ್ ಪರವಾನಗಿ ಅವಶ್ಯಕತೆ ಇದೆ. ಪರವಾನಗಿ ರದ್ದು ಮಾಡಬೇಡಿ’ ಎಂದು ದರ್ಶನ್ ಅವರು ಪೊಲೀಸರು ನೀಡಿದ್ದ ನೋಟಿಸ್ಗೆ ಪ್ರತಿಕ್ರಿಯಿಸಿದ್ದರು.

‘ನನ್ನ ವಿರುದ್ಧ ದಾಖಲಾದ ಪ್ರಕರಣದ ಸಾಕ್ಷಿಗಳಿಗೆ ಯಾವುದೇ ಬೆದರಿಕೆ ಹಾಕಿಲ್ಲ. ಒಂದು ವೇಳೆ ಅಂತಹ ಘಟನೆಗಳು ನಡೆದರೆ ಕಾನೂನು ಕ್ರಮ ಜರುಗಿಸಬಹುದು’ ಎಂದೂ ಪತ್ರದಲ್ಲಿ ಉಲ್ಲೇಖಿಸಿದ್ದರು. ಇದರ ಬೆನ್ನಲ್ಲೇ ದರ್ಶನ್ ಅವರು ಹೊಂದಿದ್ದ ಪಿಸ್ತೂಲ್ ಪರವಾನಗಿ ರದ್ದುಗೊಳಿಸಲಾಗಿದೆ.

‘ಕೊಲೆ ಪ್ರಕರಣವು ನ್ಯಾಯಾಲಯದಲ್ಲಿ ಇನ್ನೂ ವಿಚಾರಣೆ ಹಂತದಲ್ಲಿದೆ. ಸುಪ್ರೀಂ ಕೋರ್ಟ್ಗೂ ಮೇಲ್ಮನವಿ ಸಲ್ಲಿಸಲಾಗಿದ್ದು ಅಲ್ಲೂ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆ ಸೇರಿದಂತೆ ಇತರೆ ಅಂಶಗಳನ್ನು ಆಧರಿಸಿ ಪಿಸ್ತೂಲ್ ಪರವಾನಗಿಯನ್ನು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರ ಸೂಚನೆಯಂತೆ ರದ್ದುಗೊಳಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಐದು ಜೀವಂತ ಗುಂಡು ವಶಕ್ಕೆ:

ಪಿಸ್ತೂಲ್ ಅನ್ನು ವಶಕ್ಕೆ ಪಡೆಯುವಂತೆ ಆರ್.ಆರ್.ನಗರ ಪೊಲೀಸರಿಗೆ ನಗರ ಆಡಳಿತ ವಿಭಾಗದ ಡಿಸಿಪಿ ಪದ್ಮಿನಿ ಸಾಹು ಅವರು ಸೂಚಿಸಿ ಪತ್ರ ಬರೆದಿದ್ದರು. ಅದರ ಸೂಚನೆ ಬೆನ್ನಲ್ಲೇ ಮಂಗಳವಾರ ದರ್ಶನ್ ಮನೆಗೆ ತೆರಳಿದ ಪೊಲೀಸರು, ಪರವಾನಗಿ ರದ್ದು ಆದೇಶ ಪತ್ರ ತೋರಿಸಿ ಪಿಸ್ತೂಲ್ ಹಾಗೂ ಐದು ಜೀವಂತ ಗುಂಡುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.