ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಲೆ ಪ್ರಕರಣ: ಸರ್ಕಾರದ ನೆರವು ಕೋರಿದ ರೇಣುಕಸ್ವಾಮಿ ಕುಟುಂಬ

Published 25 ಜೂನ್ 2024, 15:38 IST
Last Updated 25 ಜೂನ್ 2024, 15:38 IST
ಅಕ್ಷರ ಗಾತ್ರ

ಬೆಂಗಳೂರು: ಕೊಲೆಯಾಗಿರುವ ಚಿತ್ರದುರ್ಗದ ರೇಣುಕಸ್ವಾಮಿ ಅವರ ತಂದೆ ಮತ್ತು ತಾಯಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಂಗಳವಾರ ಭೇಟಿ ಮಾಡಿದ್ದು, ಕುಟುಂಬಕ್ಕೆ ನೆರವು ನೀಡುವಂತೆ ಮನವಿ ಮಾಡಿದರು.

‘ರೇಣುಕಸ್ವಾಮಿಯ ದುಡಿಮೆಯಿಂದಲೇ ಕುಟುಂಬ ನಿರ್ವಹಣೆ ಆಗುತ್ತಿತ್ತು. ಈಗ ಮಗನ ಅಗಲಿಕೆಯಿಂದ ಕುಟುಂಬ ನಿರ್ವಹಣೆಗೂ ಕಷ್ಟವಾಗಿದೆ. ರೇಣುಕಸ್ವಾಮಿಯ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ನೆರವಿಗೆ ಬರಬೇಕು’ ಎಂದು ತಂದೆ ಮತ್ತು ತಾಯಿ ಮನವಿ ಮಾಡಿದರು.

‘ನಮ್ಮ ಸರ್ಕಾರವು ರೇಣುಕಸ್ವಾಮಿಯ ಸಾವಿಗೆ ನ್ಯಾಯ ದೊರಕಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಿದೆ. ಜೊತೆಗೆ ಅವರ ಕುಟುಂಬಕ್ಕೆ ಸಾಧ್ಯವಿರುವ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದೇನೆ’ ಎಂದು ಮುಖ್ಯಮಂತ್ರಿಯವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT