ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಟ ದರ್ಶನ್ ಜೈಲಿಗೆ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಸುತ್ತಮುತ್ತ ಬಂದೋಬಸ್ತ್‌

ಕಾರಾಗೃಹದ ಸುತ್ತಮುತ್ತ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ
Published 22 ಜೂನ್ 2024, 12:43 IST
Last Updated 22 ಜೂನ್ 2024, 12:43 IST
ಅಕ್ಷರ ಗಾತ್ರ

ಬೆಂಗಳೂರು: ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರಿಗೆ ನ್ಯಾಯಾಲಯ ಜುಲೈ 4ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು ಬಿಗಿ ಭದ್ರತೆಯಲ್ಲಿ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಗುತ್ತಿದೆ. ಕಾರಾಗೃಹದ ಸುತ್ತಮುತ್ತ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಎಲೆಕ್ಟ್ರಾನಿಕ್‌ ಸಿಟಿ ಎಸಿಪಿ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ.

ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು ಶನಿವಾರ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಮತ್ತೆ ಅವರನ್ನು ಪೊಲೀಸ್‌ ಕಸ್ಟಡಿಗೆ ಕೇಳದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.

ಚಿತ್ರದುರ್ಗದ ರೇಣುಕಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ಜೂನ್ 11ರಂದು ಮೈಸೂರಿನಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿತ್ತು. ನಂತರ, ಹೆಚ್ಚಿನ ವಿಚಾರಣೆಗೆ 12 ದಿನ ಪೊಲೀಸ್‌ ಕಸ್ಟಡಿಗೆ ಪಡೆದುಕೊಳ್ಳಲಾಗಿತ್ತು.

ಪೊಲೀಸ್‌ ವ್ಯಾನ್‌ನಲ್ಲೇ ಅಭಿಮಾನಿಗಳತ್ತ ಕೈಬೀಸಿದ ದರ್ಶನ್‌

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಕೇಂದ್ರಕ್ಕೆ ಹೋಗುವ ಮೊದಲು ಆರೋಪಿ, ನಟ ದರ್ಶನ್‌ ಅವರು ಅಭಿಮಾನಿಗಳತ್ತ ಕೈಬೀಸಿದರು. ಡಿ ಬಾಸ್‌ ಎಂದು ಅಭಿಮಾನಿಗಳು ಕಿರುಚಿದರು. ಆಗ, ಪೊಲೀಸ್‌ ವ್ಯಾನ್‌ ಒಳಗಿದ್ದ ದರ್ಶನ್‌ ಕೈಬೀಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT