ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಹಾಗೂ ಅವರ ಆಪ್ತೆ ಪವಿತ್ರಾಗೌಡ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಅಕ್ಟೋಬರ್ 4ಕ್ಕೆ ಮುಂದೂಡಿತು.
ದರ್ಶನ್‌ಗೆ ಜಾಮೀನು ಕೋರಿ ವಕೀಲ ಎಸ್.ಸುನಿಲ್ ಕುಮಾರ್ ಅವರು ನಗರದ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಧೀಶ ಜಯಶಂಕರ ಎದುರು ಸೋಮವಾರ ಈ ಅರ್ಜಿಯ ವಿಚಾರಣೆಗೆ ಬಂದಿತ್ತು.
ವಿಚಾರಣೆ ಆರಂಭ ಆಗುತ್ತಿದ್ದಂತೆ ಸುನಿಲ್ ಕುಮಾರ್ ಅವರು, ‘ವಿಶೇಷ ಪ್ರಾಸಿಕ್ಯೂಟರ್ ಆಕ್ಷೇಪಣೆ ಸಲ್ಲಿಸಿದ್ದು ವಾದ ಮಂಡಿಸಲು ಕಾಲಾವಕಾಶ ನೀಡಬೇಕು’ ಎಂದು ಕೋರಿದರು.
ಇದಕ್ಕೆ ಸಮ್ಮತಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಮುಂದೂಡಿದರು. ಇದೇ ವೇಳೆ ಪವಿತ್ರಾಗೌಡ, ರವಿಶಂಕರ್ ಸೇರಿ ಇತರೆ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನೂ ನ್ಯಾಯಾಲಯ ಮುಂದೂಡಿತು.