ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಿಂದ ಜಪ್ತಿ ಮಾಡಿದ್ದ ₹82 ಲಕ್ಷ ಹಣವನ್ನು ಆದಾಯ ತೆರಿಗೆ (ಐ.ಟಿ) ಇಲಾಖೆಗೆ ಹಸ್ತಾಂತರಿಸುವಂತೆ ನ್ಯಾಯಾಲಯವು ಆದೇಶಿಸಿದೆ.

ಕೊಲೆ ಪ್ರಕರಣದ ತನಿಖೆ ವೇಳೆ ಆರೋಪಿ ದರ್ಶನ್ ಮನೆ ಹಾಗೂ ಇತರೆ ಸ್ಥಳಗಳಲ್ಲಿ ಈ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದರು.

ಆರೋಪಿಗಳು ಹಣದ ಮೂಲದ ಬಗ್ಗೆ ಸರಿಯಾದ ಮಾಹಿತಿ ನೀಡದ ಕಾರಣಕ್ಕೆ ಐ.ಟಿ ಇಲಾಖೆಗೆ ನೀಡುವಂತೆ ನ್ಯಾಯಾಲಯವು ಆದೇಶಿಸಿದೆ. ಹಣದ ಮೂಲವನ್ನು ಐ.ಟಿ ಅಧಿಕಾರಿಗಳು ಪತ್ತೆಹಚ್ಚಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿದ್ದಾರೆ.

ಈ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್, ಪವಿತ್ರಾಗೌಡ ಸೇರಿದಂತೆ ಇತರೆ ಐವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ವಿಡಿಯೊ ಕಾನ್ಪರೆನ್ಸ್ ಮೂಲಕ ವಿಚಾರಣೆಗೆ ಬುಧವಾರ ಹಾಜರಾದರು. ದರ್ಶನ್ ಅವರು ಬ್ಯಾರಕ್ನಲ್ಲಿ ಟಿ.ವಿ ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡಿದರು.

ತಮ್ಮನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡುವಂತೆ ಆರೋಪಿಗಳಾದ ಜಗದೀಶ್ ಹಾಗೂ ಅನುಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ವಜಾ ಮಾಡಿದೆ.

ರೇಣುಕಸ್ವಾಮಿ ಅವರ ಪೋಷಕರಿಗೆ ವಿಚಾರಣೆ ಸಂಬಂಧ ಸಮನ್ಸ್ ಜಾರಿ ಮಾಡುವ ಆದೇಶವನ್ನು ನ್ಯಾಯಾಲಯವು ಕಾಯ್ದಿರಿಸಿದೆ. ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಡಿ.17ಕ್ಕೆ ಮುಂದೂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.