ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಪವಿತ್ರಾಗೌಡ ಹಾಗೂ ಅನುಕುಮಾರ್ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್ ನ್ಯಾಯಾಲಯವು ಶನಿವಾರ ವಜಾಗೊಳಿಸಿದೆ.
ಪ್ರಕರಣದ ಮೊದಲ ಆರೋಪಿ ಪವಿತ್ರಾ ಜಾಮೀನು ಅರ್ಜಿ ಸಲ್ಲಿಸಿದ್ದ ಬೆನ್ನಲ್ಲೇ ಇತರೆ ಆರೋಪಿಗಳಾದ ಅನುಕುಮಾರ್, ವಿನಯ್, ಕೇಶವಮೂರ್ತಿ ಸಹ ಜಾಮೀನಿಗೆ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಪವಿತ್ರಾ ಹಾಗೂ ಅನುಕುಮಾರ್ ಜಾಮೀನು ಅರ್ಜಿಯ ಆದೇಶವನ್ನು ಇದೇ 31ಕ್ಕೆ ಕಾಯ್ದಿರಿಸಿತ್ತು.
ವಿನಯ್ ಹಾಗೂ ಕೇಶವಮೂರ್ತಿ ಜಾಮೀನು ಆದೇಶವನ್ನು ಸೆ. 2ಕ್ಕೆ ಕಾಯ್ದಿರಿಸಲಾಗಿದೆ.