ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರೇಣುಕಾಸ್ವಾಮಿ ಹತ್ಯೆ | ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಲಿ: ವೀರಶೈವ ಮಹಾಸಭಾ

Published 12 ಜೂನ್ 2024, 15:33 IST
Last Updated 12 ಜೂನ್ 2024, 15:33 IST
ಅಕ್ಷರ ಗಾತ್ರ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿಯವರ ಹತ್ಯೆಯನ್ನು ಖಂಡಿಸಿರುವ ಅಖಿಲ ಭಾರತ ವೀರಶೈವ ಮಹಾಸಭಾ, ಕೃತ್ಯ ಎಸಗಿದವರಿಗೆ ಮತ್ತು ಸಹಕಾರ ನೀಡಿದವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದೆ.

ಯಾವುದೇ ಒತ್ತಡ, ಪ್ರಭಾವಕ್ಕೆ ಒಳಗಾಗಬಾರದು. ಆರೋಪಿ ಸ್ಥಾನದಲ್ಲಿರುವವರನ್ನು ರಕ್ಷಿಸದೇ ಸರ್ಕಾರವು ಜನಸಾಮಾನ್ಯರ ಪರವಾಗಿ ನಿಲ್ಲಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದರೆ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಹೋರಾಟ ಮಾಡಲು ನಿರ್ಧಾರ ಕೈಗೊಳ್ಳಲಾಗುವುದು. ಮೃತಪಟ್ಟಿರುವ ರೇಣುಕಾಸ್ವಾಮಿ ಅವರ ಕುಟುಂಬಕ್ಕೆ ಅಗತ್ಯ ನೆರವು ನೀಡಬೇಕು ಎಂದು ಮಹಾಸಭಾ ಕಾರ್ಯದರ್ಶಿ ಎಚ್‌.ಎಂ. ರೇಣುಕಪ್ರಸನ್ನ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT