ಶನಿವಾರ, ಜುಲೈ 2, 2022
26 °C

‘ನವ ಪ್ರಪಂಚದ ಪಿತಾಮಹ’ನ ಪಿಐಎಲ್‌ ವಜಾ..!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ನಾನು ನವ ಪ್ರಪಂಚದ ಪಿತಾಮಹ. 66 ವರ್ಷದ ಹಿರಿಯ ನಾಗರಿಕ. ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯ ನಿವಾಸಿ...! ನನ್ನ ಮನವಿ ಏನೆಂದರೆ; ರಾಜ್ಯದಲ್ಲಿ 2023ರ ರಾಜ್ಯ ವಿಧಾನಸಭಾ ಚುನಾವಣೆ ನಡೆಸಬಾರದು!! ಬದಲಿಗೆ ಎಲ್ಲಾ ರಾಜಕೀಯ ಪಕ್ಷಗಳಿಂದ ಜನಪ್ರತಿನಿಧಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು’ ಎಂದು ಕೋರಲಾಗಿದ್ದ ಅರ್ಜಿಯೊಂದನ್ನು ಹೈಕೋರ್ಟ್‌ ವಜಾಗೊಳಿಸಿದೆ.

ನಗರದ ಮುರಳಿ ಕೃಷ್ಣ ಬ್ರಹ್ಮಾನಂದಂ ಎಂಬುವರು ಸಲ್ಲಿಸಿದ್ದ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಮುಖ್ಯ ನ್ಯಾಯಮೂರ್ತಿ ಋತುರಾಜ್‌ ಅವಸ್ಥಿ ಮತ್ತು ಎಸ್.ಸುಜಾತ ಅವರಿದ್ದ ವಿಭಾಗೀಯ ನ್ಯಾಯಪೀಠ, ‘ಇವರ ಮನವಿ ತಪ್ಪು ಕಲ್ಪನೆಯಿಂದ ಕೂಡಿದ್ದು ಜನತಾ ಪ್ರತಿನಿಧಿ ಕಾಯ್ದೆ– 1951ರ ಕಾಯ್ದೆಯ ನಿಯಮಗಳನ್ನು ಪ್ರಶ್ನಿಸಿದ ಅಡಿಯಲ್ಲಿ ವಿಚಾರಣೆ ನಡೆಸಲು ಅವಕಾಶವಿಲ್ಲ’ ಎಂದು ತಿಳಿಸಿದೆ.

ಅರ್ಜಿಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ, ಮುಖ್ಯ ಚುನಾವಣಾ ಆಯುಕ್ತರು ಮತ್ತು ರಾಜಭವನದ ಕಾರ್ಯದರ್ಶಿಗಳನ್ನು ಪ್ರತಿವಾದಿಗಳನ್ನಾಗಿ ಹೆಸರಿಸಲಾಗಿತ್ತು. ‘ಕರ್ನಾಟಕದ ಆಡಳಿತವನ್ನು ಸೂಕ್ತವಾಗಿ ಪುನರ್ ರಚಿಸಲು ಮಧ್ಯಂತರ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಲು ಪ್ರತಿವಾದಿಗಳು ನನ್ನನ್ನು ಕೇಳಬೇಕು. ಇದಕ್ಕೆ ಕೋರ್ಟ್‌ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು