ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜಪೇಟೆ: ಈದ್ಗಾ ಮೈದಾನದಲ್ಲಿ ಧ್ವಜಾರೋಹಣ

Last Updated 26 ಜನವರಿ 2023, 19:56 IST
ಅಕ್ಷರ ಗಾತ್ರ

ಬೆಂಗಳೂರು: ಚಾಮರಾಜಪೇಟೆ ಆಟದ ಮೈದಾನದಲ್ಲಿ (ಈದ್ಗಾ) ಗಣರಾಜ್ಯೋತ್ಸವ ಪ್ರಯುಕ್ತ ಬೆಂಗಳೂರು ನಗರ ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉತ್ತರ ವಲಯ ಉಪ ವಿಭಾಗಾಧಿಕಾರಿ ಎಂ.ಜಿ. ಶಿವಣ್ಣ ಧ್ವಜಾರೋಹಣ ನೆರವೇರಿಸಿದರು.

ಸರ್ಕಾರದ ಸೂಚನೆ ಮೇರೆಗೆ ಬುಧವಾರ ಗಣರಾಜ್ಯೋತ್ಸವ ಆಚರಿಸುವ ತಯಾರಿ ಆರಂಭಿಸಿದ ಜಿಲ್ಲಾಡಳಿತ, ಗುರುವಾರ ಬೆಳಿಗ್ಗೆ ಪೊಲೀಸ್‌ ಬಂದೋಬಸ್ತ್‌ ನಡುವೆ ಕಾರ್ಯಕ್ರಮ ನಡೆಸಿತು.

ಬಿಬಿಎಂಪಿ ಶಾಲೆಯ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಸಂಸದ ಪಿ.ಸಿ. ಮೋಹನ್, ಶಾಸಕ ಜಮೀರ್ ಅಹಮದ್, ಡಿಸಿಪಿ ಲಕ್ಷ್ಮಣ ನಿಂಬರಗಿ ಭಾಗವಹಿಸಿದ್ದರು.

ಮೈದಾನದಲ್ಲಿ ಒಬ್ಬರು ಡಿಸಿಪಿ, ನಾಲ್ವರು ಎಸಿಪಿ ನೇತೃತ್ವದಲ್ಲಿ 10 ಪಿಐ, 20 ಪಿಎಸ್‌ಐ, 300 ಸಿಬ್ಬಂದಿ, 6 ಕೆಎಸ್‌ಆರ್‌ಪಿ ತುಕಡಿಯಿಂದ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಧ್ವಜಾರೋಹಣ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಡೆದ 74ನೇ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಆಡಳಿತಾಧಿಕಾರಿ ರಾಕೇಶ್‌ಸಿಂಗ್‌ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತರಾದ ಜಯರಾಮ್ ರಾಯಪುರ, ಡಾ. ತ್ರಿಲೋಕ್ ಚಂದ್ರ, ಡಾ. ಹರೀಶ್ ಕುಮಾರ್, ರವೀಂದ್ರ, ಪ್ರೀತಿ ಗೆಹ್ಲೋಟ್, ಉಪ ಆಯುಕ್ತರಾದ ರಾಹುಲ್ ಶರಣಪ್ಪ ಸಂಕನೂರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT