ಬೆಂಗಳೂರು: ನವದೆಹಲಿಯಲ್ಲಿ ಜ.26ರಂದು ಗಣರಾಜ್ಯೋತ್ಸವದ ಅಂಗವಾಗಿ ಕೆಂಪು ಕೋಟೆಯಲ್ಲಿ ಆಯೋಜಿಸುವ ಭಾರತ ಪರ್ವದಲ್ಲಿ ಕರ್ನಾಟಕವು ಸಿರಿಧಾನ್ಯದಿಂದ ಮೈಕ್ರೋಚಿಪ್ವರೆಗೆ (ಮಿಲ್ಲೆಟ್ ಟು ಮೈಕ್ರೋಚಿಪ್) ಎನ್ನುವ ಸ್ತಬ್ಧಚಿತ್ರ ಪ್ರದರ್ಶಿಸುತ್ತಿದೆ.

ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಭಾರತ ಪರ್ವದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟ್ಯಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ಗಮನ ಸೆಳೆಯುತ್ತಿದೆ.

‘ಸಿರಿಧಾನ್ಯಗಳ ಉತ್ಪಾದನೆ ಮತ್ತು ಪೌಷ್ಟಿಕ ಆಹಾರದ ಬಳಕೆಯನ್ನು ಉತ್ತೇಜಿಸುವಲ್ಲಿ ಕರ್ನಾಟಕವು ದೇಶದ ಪ್ರಮುಖ ರಾಜ್ಯಗಳಲ್ಲಿ ಒಂದಾಗಿದೆ. ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬೆಂಗಳೂರು ಜಾಗತಿಕವಾಗಿ ಗಮನ ಸೆಳೆದಿದೆ. ಮೈಕ್ರೋಚಿಪ್, ಎಲೆಕ್ಟ್ರಾನಿಕ್ಸ್ ಹಾಗೂ ಸೆಮಿಕಂಡಕ್ಟರ್ ವಲಯಗಳಲ್ಲಿನ ಆವಿಷ್ಕಾರಗಳು ಕರ್ನಾಟಕವನ್ನು ಶ್ರೇಷ್ಠ ತಂತ್ರಜ್ಞಾನ ಕೇಂದ್ರವಾಗಿಸಿದೆ. ಇವೆಲ್ಲವೂ ಸ್ತಬ್ಧಚಿತ್ರದಲ್ಲಿ ಮೇಳೈಸಿವೆ’ ಎಂದು ಆಯುಕ್ತ ಹೇಮಂತ್ ಎಂ.ನಿಂಬಾಳ್ಕರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.