ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣರಾಜ್ಯೋತ್ಸವ: ಸಾರ್ವಜನಿಕರಿಗೆ ಪ್ರವೇಶವಿಲ್ಲ, ಸಾಂಸ್ಕೃತಿಕ ಕಾರ್ಯಕ್ರಮವಿಲ್ಲ

Last Updated 24 ಜನವರಿ 2021, 4:50 IST
ಅಕ್ಷರ ಗಾತ್ರ

ಬೆಂಗಳೂರು: ‘ಕೋವಿಡ್ ಮಾರ್ಗಸೂಚಿಯನ್ವವೇ ಗಣರಾಜ್ಯೋತ್ಸವ ನಡೆಯಲಿದ್ದು, ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮ ಇರುವುದಿಲ್ಲ. ಸಾರ್ವಜನಿಕರಿಗೂ ಪ್ರವೇಶ ಇರುವುದಿಲ್ಲ’ ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ ಪ್ರಸಾದ್ ಹೇಳಿದರು.

‘ಇಡೀ ಕಾರ್ಯಕ್ರಮ 40 ನಿಮಿಷದಲ್ಲಿ ಮುಗಿಯಲಿದೆ. ಪಥಸಂಚಲನ, ರಾಜ್ಯಪಾಲರ ಭಾಷಣ ಇರಲಿದೆ’ ಎಂದರು.

‘ಅತಿಗಣ್ಯ, ಗಣ್ಯ ಮತ್ತು ಇತರೆ ಆಹ್ವಾನಿತರಿಗೆ 500 ಆಸನ ವ್ಯವಸ್ಥೆ ಕಲ್ಪಿಸಲಾಗಿದೆ‌. ಪಾಸ್ ಹೊಂದಿದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ’ ಎಂದರು.

ಭದ್ರತೆ: ಭದ್ರತೆಗಾಗಿ 7 ಡಿಸಿಪಿ, 16 ಎಸಿಪಿ ಸೇರಿದಂತೆ 1,100ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. 16 ತುಕಡಿಗಳು ಪಥಸಂಚಲನದಲ್ಲಿ ಭಾಗವಹಿಸಲಿವೆ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT