ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸರ್ಕಾರಿ ಶಾಲೆಗಳನ್ನು ದತ್ತು ಪಡೆಯಲು ಕೋರಿಕೆ

ಶಾಸಕರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮನವಿ
Published : 29 ಆಗಸ್ಟ್ 2024, 22:30 IST
Last Updated : 29 ಆಗಸ್ಟ್ 2024, 22:30 IST
ಫಾಲೋ ಮಾಡಿ
Comments

ಬೆಂಗಳೂರು: ‘ಎಲ್ಲ ಶಾಸಕರು ತಾವು ಪ್ರತಿನಿಧಿಸುವ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿನ ತಲಾ ಐದು ಸರ್ಕಾರಿ ಶಾಲೆಗಳನ್ನು ದತ್ತು ಪಡೆದು, ಅವುಗಳನ್ನು ಸಬಲೀಕರಣಗೊಳಿಸಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮನವಿ ಮಾಡಿದೆ.

ಈ ಬಗ್ಗೆ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರು ಹಾಗೂ ಎಲ್ಲ ಶಾಸಕಕರಿಗೆ ಪತ್ರ ಬರೆದಿದ್ದಾರೆ. ದತ್ತು ಪಡೆದ ಶಾಲೆಗಳನ್ನು ಸಬಲೀಕರಣಗೊಳಿಸಿ, ಮಾದರಿ ಶಾಲೆಯನ್ನಾಗಿ ರೂಪಿಸಬೇಕು ಎಂದು ಅವರು ತಿಳಿಸಿದ್ದಾರೆ.

‘ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಬಲಗೊಳಿಸಿ, ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಸಬಲೀಕರಣಗೊಳಿಸಲು ಪ್ರಾಧಿಕಾರವು ರಾಜ್ಯ ಸರ್ಕಾರಕ್ಕೆ ಸಲಹೆ ನೀಡುತ್ತಾ ಬಂದಿದೆ. ಆದರೂ ಒಂದೂವರೆ ದಶಕದಿಂದ ರಾಜ್ಯದಲ್ಲಿ ಸರ್ಕಾರಿ ಶಾಲೆಗಳು ದುರ್ಬಲಗೊಳ್ಳುತ್ತಿದ್ದು, ಶಿಕ್ಷಣದ ಖಾಸಗೀಕರಣ ಹಾಗೂ ವ್ಯಾಪಾರೀಕರಣ ನಾಗಲೋಟದಲ್ಲಿ ಸಾಗುತ್ತಿದೆ’ ಎಂದು ಅವರು ಹೇಳಿದ್ದಾರೆ. 

‘ಸರ್ಕಾರಿ ಶಾಲೆಗಳು ಉಳಿದರೆ ಮಾತ್ರ ಕನ್ನಡ ಭಾಷೆ ಹಾಗೂ ಸಂಸ್ಕೃತಿ ಉಳಿಯಬಲ್ಲದು. ಶಾಲೆಗಳನ್ನು ದತ್ತು ಪಡೆದು, ಸಬಲೀಕರಣಗೊಳಿಸುವ ವಿಷಯಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಅಗತ್ಯವಿದ್ದಲ್ಲಿ ಶಾಸಕರು ಪ್ರಾಧಿಕಾರವನ್ನು ಸಂಪರ್ಕಿಸಬಹುದು’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT