ಶುಕ್ರವಾರ, ಸೆಪ್ಟೆಂಬರ್ 17, 2021
30 °C

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹ: ಇಂದು ಉಪವಾಸ ಸತ್ಯಾಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಮೇಕೆದಾಟು ಯೋಜನೆಯ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ವಿಳಂಬ ನೀತಿ ಖಂಡಿಸಿ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಎದುರು ಆಗಸ್ಟ್‌ 5ರಂದು ಉಪವಾಸ ಸತ್ಯಾಗ್ರಹ ನಡೆಸಲಾಗುವುದು’ ಎಂದು ಆಮ್‌ ಆದ್ಮಿ ಪಕ್ಷದ (ಎಎಪಿ) ರಾಜಕೀಯ ಚಟುವಟಿಕೆ ವಿಭಾಗದ ಮುಖ್ಯಸ್ಥ ಎಸ್.ವಿ.ಫಣಿರಾಜ್‌ ತಿಳಿಸಿದರು.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಈ ಹಿಂದೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ಅಧಿಕಾರದಲ್ಲಿದ್ದಾಗ ಕುಂಟು ನೆಪ ಹೇಳಿಕೊಂಡು ಈ ಯೋಜನೆಯನ್ನು ಮುಂದೂಡಿ, ಜನರನ್ನು ವಂಚಿಸಿವೆ. ಈಗಿನ ‘ಡಬಲ್ ಎಂಜಿನ್’ ಬಿಜೆಪಿ ಸರ್ಕಾರವೂ ವಿಳಂಬ ನೀತಿ ಅನುಸರಿಸುತ್ತಿದೆ’ ಎಂದು ದೂರಿದರು.

‘ಭವಿಷ್ಯದ ದೃಷ್ಟಿಯಿಂದ ಮೇಕೆದಾಟು ಯೋಜನೆ ಅನಿವಾರ್ಯವಾಗಿದೆ. ಒಂದು ವರ್ಷದೊಳಗೆ ಈ ಯೋಜನೆಯನ್ನು ಪೂರ್ಣಗೊಳಿಸಬೇಕೆಂದು ಆಗ್ರಹಿಸಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದಲ್ಲಿ ಗುರುವಾರ ಬೆಳಿಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು’ ಎಂದು ಹೇಳಿದರು.

ಮಹಿಳಾ ಘಟಕದ ನಾಯಕಿ ಉಷಾ ಮೋಹನ್,‘ತಮಿಳುನಾಡಿನ ಬಿಜೆ‍ಪಿ ಮತ್ತು ಕಾಂಗ್ರೆಸ್‌ ನಾಯಕರು ಮೇಕೆದಾಟು ಯೋಜನೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿಕೆ ನೀಡುತ್ತಿದ್ದಾರೆ. ಕುಡಿಯುವ ನೀರಿನ ಯೋಜನೆಯಿಂದ ತಮಿಳುನಾಡಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂಬುದನ್ನು ರಾಜ್ಯದ ನಾಯಕರು ಅವರಿಗೆ ಮನವರಿಕೆ ಮಾಡಲಿ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು