ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಕಾಲೇಜುಗಳಲ್ಲಿ ರೆಡ್‌ ಕ್ರಾಸ್‌ ಘಟಕ ಆರಂಭಕ್ಕೆ ಮನವಿ

Last Updated 26 ಅಕ್ಟೋಬರ್ 2021, 16:56 IST
ಅಕ್ಷರ ಗಾತ್ರ

ಬೆಂಗಳೂರು: ಕಾಲೇಜುಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಎನ್‌ಸಿಸಿ ಘಟಕಗಳ ಮಾದರಿಯಲ್ಲಿ ರೆಡ್‌ ಕ್ರಾಸ್‌ ಘಟಕಗಳನ್ನೂ ಆರಂಭಿಸಲು ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕ್ರಮ ಕೈಗೊಳ್ಳುವಂತೆ ರೆಡ್‌ ಕ್ರಾಸ್‌ ರಾಜ್ಯ ಘಟಕ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಅವರಿಗೆ ಮನವಿ ಸಲ್ಲಿಸಿದೆ.

ರೆಡ್‌ ಕ್ರಾಸ್‌ ರಾಜ್ಯ ಘಟಕದ ಅಧ್ಯಕ್ಷ ನಾಗಣ್ಣ, ಉಪಾಧ್ಯಕ್ಷ ಗೋಪಾಲ್‌ ಬಿ. ಹೊಸೂರ್‌ ನೇತೃತ್ವದ ನಿಯೋಗ ಮಂಗಳವಾರ ಸಚಿವರನ್ನು ಭೇಟಿಮಾಡಿ ಮನವಿ ಸಲ್ಲಿಸಿತು. ರಾಜ್ಯದ ಎಲ್ಲ ಪದವಿ ಕಾಲೇಜುಗಳಲ್ಲಿ ರೆಡ್‌ ಕ್ರಾಸ್‌ ಘಟಕ ಆರಂಭಕ್ಕೆ ಅವಕಾಶ ಕಲ್ಪಿಸಿ ಆದೇಶ ಹೊರಡಿಸುವಂತೆ ಮನವಿಯಲ್ಲಿ ಕೋರಲಾಗಿದೆ.

‘ನಿಯೋಗದ ಜತೆ ಚರ್ಚಿಸಿದ ಸಚಿವರು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪಠ್ಯಕ್ರಮ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಸಂಬಂಧಿಸಿದ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಮುಂಬರುವ ಶೈಕ್ಷಣಿಕ ವರ್ಷಗಳಲ್ಲಿ ರೆಡ್‌ ಕ್ರಾಸ್‌ ಘಟಕಗಳ ಆರಂಭಕ್ಕೆ ಕ್ರಮ ಕೈಗೊಳ್ಳಲಾಗವುದು ಎಂಬ ಭರವಸೆ ನೀಡಿದರು’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT