ಬೆಂಗಳೂರು: ಅರೆ ವೈದ್ಯಕೀಯ ಕೋರ್ಸ್‌ಗಳನ್ನು (ಪ್ಯಾರಾ ಮೆಡಿಕಲ್) ಪದವಿಪೂರ್ವ ಶಿಕ್ಷಣಕ್ಕೆ ತತ್ಸಮಾನ ಎಂದು ಪರಿಗಣಿಸಲು ಕೋರಿ ಕರ್ನಾಟಕ ನರ್ಸಿಂಗ್ ಮತ್ತು ಅರೆವೈದ್ಯಕೀಯ ವಿಜ್ಞಾನಗಳ ಶಿಕ್ಷಣ ಪ್ರಾಧಿಕಾರ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ.
ಪದವಿಪೂರ್ವ ಶಿಕ್ಷಣಕ್ಕೆ ತತ್ಸಮಾನ ಎಂದು ಪರಿಗಣಿಸಿದರೆ ಸಾವಿರಾರು ವಿದ್ಯಾರ್ಥಿಗಳ ಪದವಿ ಶಿಕ್ಷಣಕ್ಕೆ ನೆರವಾಗುತ್ತದೆ. ಪದವಿ ಪೂರ್ವ ಶಿಕ್ಷಣ ನಿರ್ದೇಶನಾಲಯ ಇಂತಹ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರಾಧಿಕಾರದ ವಿಶೇಷ ಅಧಿಕಾರಿ ಪತ್ರದಲ್ಲಿ ಕೋರಿದ್ದಾರೆ.