ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿಥಿ ಶಿಕ್ಷಕರ ಬೇಡಿಕೆ ಈಡೇರಿಕೆಗೆ ಆಗ್ರಹ

Published 19 ಜುಲೈ 2023, 19:20 IST
Last Updated 19 ಜುಲೈ 2023, 19:20 IST
ಅಕ್ಷರ ಗಾತ್ರ

ಬೆಂಗಳೂರು: ಸೇವಾ ಭದ್ರತೆ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ನೇತೃತ್ವದಲ್ಲಿ ಅತಿಥಿ ಶಿಕ್ಷಕರು ಬುಧವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿವರ್ಷ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವಾಗ ಸೇವಾ ಹಿರಿತನ ಪರಿಗಣಿಸಿ ಮೊದಲ ಆದ್ಯತೆ ನೀಡಬೇಕು ಮತ್ತು ಮೆರಿಟ್‌ ಪದ್ಧತಿ ತೆಗೆದು ಹಾಕಬೇಕು. ಸರ್ಕಾರಿ ಶಿಕ್ಷಕರಂತೆ ಮಧ್ಯಂತರ ರಜೆ ಮತ್ತು ಬೇಸಿಗೆ ರಜೆಯಲ್ಲಿಯೂ ವೇತನ ನೀಡಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವ ಜೊತೆಗೆ ಸೇವೆಯಲ್ಲಿ ಮುಂದುವರಿಸಿ ನೇಮಕಾತಿಯಲ್ಲಿ ಶೇ 5 ಕೃಪಾಂಕ ನೀಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಅತಿಥಿ ಶಿಕ್ಷಕರನ್ನು ಕಾಯಂಗೊಳಿಸಲು ದೆಹಲಿ, ಹರಿಯಾಣ, ಪಂಜಾಬ್, ಉತ್ತರ ಪ್ರದೇಶ ಸರ್ಕಾರಗಳು ಕ್ರಮ ಕೈಗೊಂಡಿವೆ. ಕರ್ನಾಟಕ ಸರ್ಕಾರವೂ ಇದೇ ನೀತಿ ಅನುಸರಿಸಬೇಕು. ಆಯಾ ಶಾಲೆಗಳಲ್ಲಿ ಸೇವಾ ದೃಢೀಕರಣ ಪತ್ರವನ್ನು ನೀಡಬೇಕು. ಆಕಸ್ಮಿಕ ಅವಘಡಗಳಿಂದ ಜೀವಕ್ಕೆ ತೊಂದರೆಯಾದಾಗ ಅವರ ಕುಟುಂಬಕ್ಕೆ ಪರಿಹಾರ ಧನ ನೀಡಬೇಕು. ಇಲ್ಲವೇ ಜೀವವಿಮಾ ಯೋಜನೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಪ್ರತಿ ತಿಂಗಳು ಸರಿಯಾಗಿ ವೇತನ ಪಾವತಿಸಬೇಕು. ಅತಿಥಿ ಶಿಕ್ಷಕರ ಬ್ಯಾಂಕ್‌ ಖಾತೆಗೆ ನೇರ ಪಾವತಿಸಬೇಕು. ಅತಿಥಿ ಶಿಕ್ಷಕ ಎಂಬ ಪದ ತೆಗೆದು ಹಾಕಿ ಗೌರವ ಶಿಕ್ಷಕ ಎಂದು ನಮೂದಿಸಬೇಕು. ಕಾಯಂ ಶಿಕ್ಷಕರಂತೆ ಅತಿಥಿ ಶಿಕ್ಷಕರಿಗೂ ಸಮಾನ ಸ್ಥಾನಮಾನ, ವಿವಿಧ ತರಬೇತಿಗಳಿಗೆ ಅವಕಾಶ ನೀಡಬೇಕು. ಹಾಜರಾತಿಯಲ್ಲಿ ಸೇರ್ಪಡೆ ಮಾಡಬೇಕು ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT