ಮಂಗಳವಾರ, ಸೆಪ್ಟೆಂಬರ್ 29, 2020
23 °C

ಕಬ್ಬನ್‌ ಪಾರ್ಕ್‌ನಲ್ಲಿ ವಾಹನ ಸಂಚಾರಕ್ಕೆ ಅನುಮತಿ ನೀಡಲು ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಬ್ಬನ್ ಉದ್ಯಾನದಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡುವಂತೆ ಕರ್ನಾಟಕ ಸರ್ಕಾರ ಸಚಿವಾಲಯ ಕ್ಲಬ್ ಮನವಿ ಮಾಡಿದೆ.

ಈ ಕುರಿತು ಕ್ಲಬ್‍ನ ಗೌರವ ಕಾರ್ಯದರ್ಶಿ ಯು.ಡಿ.ನರಸಿಂಹಯ್ಯ ಅವರು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರಿಗೆ ಪತ್ರ ಬರೆದಿದ್ದಾರೆ.

'ಕಬ್ಬನ್ ಉದ್ಯಾನದಲ್ಲಿರುವ ಸಚಿವಾಲಯ ಕ್ಲಬ್ ಸೆ.1ರಿಂದ ಚಟುವಟಿಕೆಗಳನ್ನು ಆರಂಭಿಸಿದೆ. ವಿವಿಧ ಉದ್ದೇಶಗಳಿಗಾಗಿ ಹಲವರು ಉದ್ಯಾನದಲ್ಲಿರುವ ವಿವಿಧ ಕಚೇರಿಗಳಿಗೆ ಬರುತ್ತಾರೆ. ಆದರೆ, ಉದ್ಯಾನದ ಪ್ರವೇಶದ್ವಾರಗಳನ್ನು ಮುಚ್ಚಿರುವುದರಿಂದ ಕ್ಲಬ್‍ನ ಕಾರ್ಯಚಟುವಟಿಕೆಗಳಿಗೆ ಬಹಳ ತೊಂದರೆ ಉಂಟಾಗಿದೆ. ಹಾಗಾಗಿ, ಉದ್ಯಾನದಲ್ಲಿ ಮೊದಲಿನಂತೆ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು' ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು