ಬೆಂಗಳೂರು: ಚಲಿಸುತ್ತಿದ್ದ ರೈಲು ಹತ್ತುವ ವೇಳೆ ಆಯತಪ್ಪಿ ಬಿದ್ದು, ಅಪಾಯಕ್ಕೆ ಸಿಲುಕಿದ್ದ ಪ್ರಯಾಣಿಕನನ್ನು ಮಾಜಿ ಸೈನಿಕ ಹಾಗೂ ರೈಲ್ವೆ ಇಲಾಖೆ ಸಿಬ್ಬಂದಿ ಕೆ.ಆರ್.ಪುರ ರೈಲು ನಿಲ್ದಾಣದಲ್ಲಿ ರಕ್ಷಿಸಿದ್ದಾರೆ.

ರಕ್ಷಣೆ ಮಾಡುತ್ತಿರುವ ದೃಶ್ಯವು ನಿಲ್ದಾಣದಲ್ಲಿ ಅಳವಡಿಸಿರುವ ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕೆ.ಆರ್. ಪುರ ನಿಲ್ದಾಣದಿಂದ ಸೋಮವಾರ ರಾತ್ರಿ ರೈಲು ಮಂಗಳೂರಿನತ್ತ ಹೊರಟಿತ್ತು. ರೈಲು ವೇಗ ಪಡೆದುಕೊಂಡಾಗ ಪ್ರಯಾಣಿಕನೊಬ್ಬ ರೈಲು ಹತ್ತಲು ಮುಂದಾಗಿದ್ದ. ಆಗ ಆಯತಪ್ಪಿ ಬಿದ್ದಿದ್ದು, ರೈಲು ಆತನನ್ನು ಎಳೆದುಕೊಂಡು ಮುಂದಕ್ಕೆ ಸಾಗಿತು. ಸ್ಥಳದಲ್ಲಿದ್ದ ಮಾಜಿ ಸೈನಿಕ ಸತೀಶ್ ಮತ್ತು ರೈಲ್ವೆ ಇಲಾಖೆಯ ಸಿಬ್ಬಂದಿ ಪ್ರದೀಪ್ ಕುಮಾರ್ ಅವರು ಸಿನಿಮೀಯ ಶೈಲಿಯಲ್ಲಿ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಪ್ರಯಾಣಿಕ ಅಪಾಯದಿಂದ ಪಾರಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.