ಶನಿವಾರ, ಡಿಸೆಂಬರ್ 7, 2019
25 °C

ಸಂಶೋಧನಾ ವಿದ್ಯಾರ್ಥಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ) ಸಂಶೋಧನಾ ವಿದ್ಯಾರ್ಥಿ ಮರಣ ಪತ್ರ ಬರೆದಿಟ್ಟು, ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಿಗೆಹಳ್ಳಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ಕೊಡಿಗೆಹಳ್ಳಿಯ ಮಾರುತಿ ನಗರದ ಬಾಡಿಗೆ ಮನೆಯಲ್ಲಿ ನೆಲೆಸಿದ್ದ, ಉತ್ತರ ಪ್ರದೇಶದ ಪ್ರಸನ್ನ ತ್ರಿಪಾಠಿ (25) ನೇಣುಹಾಕಿಕೊಂಡು ಸಾವಿಗೆ ಶರಣಾದ ವಿದ್ಯಾರ್ಥಿ.

ಕಾಲೇಜಿಗೆ ಭಾನುವಾರ ರಜೆ ಇದ್ದುದರಿಂದ ತ್ರಿಪಾಠಿ, ತಮ್ಮ ಮನೆಯಲ್ಲಿ ಒಬ್ಬರೇ ಇದ್ದರು. ರಾತ್ರಿ 11 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತ್ರಿಪಾಠಿ ಜೊತೆಗೆ ವಾಸವಿದ್ದ ತಮಿಳುನಾಡಿನ ವಿದ್ಯಾರ್ಥಿಯೊಬ್ಬರು ಮೂರು ದಿನಗಳ ಹಿಂದೆಯಷ್ಟೇ ಊರಿಗೆ ಹೋಗಿದ್ದರು. ಕೆಲವು ದಿನಗಳ ಹಿಂದೆ ಅವರಿಬ್ಬರ ಮಧ್ಯೆ ಜಗಳ ನಡೆದಿತ್ತು. ಇದರಿಂದ ತ್ರಿಪಾಠಿ ತೀವ್ರವಾಗಿ ನೊಂದುಕೊಂಡಿದ್ದರು ಎನ್ನಲಾಗಿದೆ. ಆದರೆ, ಮರಣಪತ್ರದಲ್ಲಿ, ‘ನನ್ನ ಸಾವಿಗೆ ಯಾರು ಕಾರಣರಲ್ಲ’ ಎಂದು ತ್ರಿಪಾಠಿ ಉಲ್ಲೇಖಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು