ಬುಧವಾರ, ಏಪ್ರಿಲ್ 8, 2020
19 °C
ಅನ್ಯಾಯ ಸರಿಪಡಿಸಲು ಸರ್ಕಾರಕ್ಕೆ ಸಲಹೆ: ಭರವಸೆ

ಅಲೆಮಾರಿಗಳಿಗೆ ಮೀಸಲಾತಿ: ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳಲ್ಲಿ ಹರಿದು ಹಂಚಿಹೋಗಿರುವ ಅಲೆಮಾರಿ ಸಮುದಾಯಗಳಿಗೆ ಮೀಸಲಾತಿಗೆ ಸೌಲಭ್ಯ ಸಿಗುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಲಾಗಿದೆ.

ಬುಧವಾರ ಇಲ್ಲಿ ಮೀಸಲಾತಿ ಪ್ರಮಾಣ ನಿರ್ಧರಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಶಿಫಾರಸು ಮಾಡಲು ರಚಿಸಲಾಗಿರುವ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನದಾಸ್‌ ನೇತೃತ್ವದ ಆಯೋಗಕ್ಕೆ ಅಲೆಮಾರಿ ಸಮುದಾಯದ ಎ.ಆರ್‌.ಗೋವಿಂದಸ್ವಾಮಿ, ಆದರ್ಶ ಯಲ್ಲಾಪುರ, ಸುಗುಣಾ, ಕಿರಣ್‌ ಕುಮಾರ್‌ ಅವರು ಮನವಿ ಸಲ್ಲಿಸಿದರು.

ನ್ಯಾಯದ ಭರವಸೆ:  ಅಲೆಮಾರಿ ಸಮುದಾಯಕ್ಕೆ ಖಂಡಿತ ಮೀಸಲಾತಿ ಸೌಲಭ್ಯ ಕಲ್ಪಿಸಲು ಸಾಧ್ಯವಿದೆ, ಅನ್ಯಾಯ ಸರಿಪಡಿಸುವ ನಿಟ್ಟಿನಲ್ಲಿ ಅಧ್ಯಯನ ನಡೆಸುತ್ತಿದ್ದು, ಎಲ್ಲ ವರದಿಗಳು, ಮನವಿಗಳನ್ನು ಕ್ರೋಡೀಕರಿಸಿ ಸರ್ಕಾರಕ್ಕೆ ಸಲಹೆ ನೀಡುವುದಾಗಿ ನ್ಯಾಯಮೂರ್ತಿ ನಾಗಮೋಹನದಾಸ್‌ ಭರವಸೆ ನೀಡಿದರು.

‘ಅಲೆಮಾರಿಗಳು ಒಂದು ರೀತಿಯ ಅನಿಕೇತನ ಇದ್ದಂತೆ. ಅವರಿಗೆ ಒಂದು ನಿಗಮ ಮಂಡಳಿ ಸ್ಥಾಪಿಸಬೇಕು’ ಎಂದು ಚಿಂತಕ ಪ್ರೊ.ಬರಗೂರು ರಾಮಚಂದ್ರಪ್ಪ ಹೇಳಿದರು.

ಪ್ರತ್ಯೇಕ ಅಭಿವೃದ್ಧಿ ಸ್ಥಾಪಿಸಬೇಕು ಎಂದು ರಾಜ್ಯಸಭಾ ಸದಸ್ಯ ಎಲ್‌.ಹನುಮಂತಯ್ಯ ಆಗ್ರಹಿಸಿದರೆ, ಈ ಸಮುದಾಯಕ್ಕೆ ಸಂವಿಧಾನಬದ್ಧವಾಗಿ ಮೀಸಲಾತಿ ಹಂಚಿಕೆಯಾಗಬೇಕು ಎಂದು ಹಿರಿಯ ಮುಖಂಡ ಡಿ.ವೀರಯ್ಯ ಒತ್ತಾಯಿಸಿದರು. 

ಅಲೆಮಾರಿ ಬುಡಕಟ್ಟು ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ಕೋಷದ ನೋಡಲ್ ಅಧಿಕಾರಿ ಡಾ. ಬಾಲಗುರುಮೂರ್ತಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು