ಬೆಂಗಳೂರು: ‘ಮೀಸಲಾತಿ ಕುರಿತು ಸುಪ್ರೀಂಕೋರ್ಟ್ ಹೊರಡಿಸಿದ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಮರುಪರಿಶೀ
ಲನಾ ಅರ್ಜಿ ಸಲ್ಲಿಸಬೇಕು’ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಆಗ್ರಹಿಸಿದರು.

ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಮೀಸಲಾತಿ ಮೂಲಭೂತ ಹಕ್ಕಲ್ಲ’ ಎಂಬ ತೀರ್ಪು ಖಂಡನೀಯ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ತಳವರ್ಗದವರ ಹಕ್ಕುಗಳನ್ನು ಕಸಿಯುತ್ತಿದೆ. ಸಂವಿಧಾನದ ಆಶಯಗಳನ್ನೇ ಬುಡಮೇಲು ಮಾಡಲು ಹೊರಟಿದೆ’ ಎಂದರು.

‘ಈ ತೀರ್ಪಿನ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಲು ಶೀಘ್ರವೇ ರಾಜ್ಯಮಟ್ಟದ ವಿಚಾರ ಸಂಕಿರಣ ಹಮ್ಮಿಕೊಳ್ಳುವ ಮೂಲಕ ಜನಾಂದೋಲನ ನಡೆಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.