ಮಂಗಳವಾರ, ಮಾರ್ಚ್ 31, 2020
19 °C
ಅಭಿನಂದನಾ ಸಮಾರಂಭದಲ್ಲಿ ಕಾರಜೋಳ ವಿಶ್ವಾಸ

ಒಳಮೀಸಲಾತಿ ಹೋರಾಟ: ಸಿಗಲಿದೆ ನ್ಯಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬೆಂಗಳೂರು: ‘200 ವರ್ಷಗಳ ಸುದೀರ್ಘ ಹೋರಾಟದ ಬಳಿಕವಷ್ಟೇ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ. ಒಳಮೀಸಲಾತಿ ವಿಷಯದಲ್ಲಿ ಅನ್ಯಾಯಕ್ಕೊಳಗಾಗಿರುವ ದಲಿತರು ನಿರಂತರ ಹೋರಾಟ ನಡೆಸಿದರೆ ಖಂಡಿತಾ ನ್ಯಾಯ ಸಿಗಲಿದೆ’ ಎಂದು ಶಾಸಕ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದರು.

ನೂತನ ಶಾಸಕರನ್ನು ಅಭಿನಂದಿಸುವ ಸಲುವಾಗಿ ಭಾವರೂಪಕ ಪ್ರತಿಷ್ಠಾನ ಟ್ರಸ್ಟ್ ಹಾಗೂ ಆದಿಜಾಂಬವ ಜಾಗೃತಿ ವೇದಿಕೆ ಇಲ್ಲಿ ಭಾನುವಾರ ಆಯೋಜಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

‘ಬಿಜೆಪಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಒಳಮೀಸಲಾತಿ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿತ್ತು. ಅದು ತಿರಸ್ಕಾರವಾಗಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಈ ಬಗ್ಗೆ ಸಂಸದರಾದ ಕೆ.ಎಚ್‌.ಮುನಿಯಪ್ಪ, ಬಿ.ಎನ್.ಚಂದ್ರಪ್ಪ ಮತ್ತು ರಾಜ್ಯಸಭಾ ಸದಸ್ಯ ಹನುಮಂತಯ್ಯ ಅವರು ಪರಿಶೀಲನೆ ನಡೆಸಿ ಅದರ ಜಾರಿಗೆ ಒತ್ತಡ ಹೇರಬೇಕು’ ಎಂದು ಒತ್ತಾಯಿಸಿದರು.

ಸಂಸದ ಕೆ.ಎಚ್.ಮುನಿಯಪ್ಪ, ‘ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಮಾದಿಗ ಸಮುದಾಯದ ಅಭಿವೃದ್ಧಿಗಾಗಿ ಆದಿಜಾಂಬವಅಭಿವೃದ್ಧಿ ನಿಗಮ ರಚನೆಗೆ ಚಾಲನೆ ನೀಡಲಾಗಿತ್ತು. ಅದು ಉದ್ಘಾಟನೆಗೆ ಸಿದ್ಧವಾಗಿದೆ’ ಎಂದರು.

‘ವಿಧಾನಸಭೆಯಲ್ಲಿ ನಮ್ಮವರಿಗೆ ಹೆಚ್ಚಿನ ಪ್ರಾತಿನಿಧ್ಯ ಸಿಗಬೇಕು’ ಎಂಬ ಆಶಯ ವ್ಯಕ್ತಪಡಿಸಿದರು.

ಮಾದಿಗ ದಂಡೋರದ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಮಾದಿಗ, ’ರಾಜ್ಯದಲ್ಲಿ ಸದಾಶಿವ ಆಯೋಗದ ವರದಿಯ ಜಾರಿಗಾಗಿ ಒತ್ತಾಯಿಸಿದರೂ ನ್ಯಾಯ ಸಿಗಲಿಲ್ಲ. ಸಮುದಾಯದ ಯಾವೊಬ್ಬ ಶಾಸಕರಿಗೂ ಸಚಿವ ಸ್ಥಾನ ನೀಡದೆ ವಂಚಿಸಲಾಗಿದೆ. ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಆಶಯಗಳನ್ನು ದುರ್ಬಲಗೊಳಿಸುವ ಪ್ರಯತ್ನಗಳಿಗೆ ವಿರೋಧ ವ್ಯಕ್ತಪಡಿಸುವ ಸಲುವಾಗಿ ಆಗಸ್ಟ್ 8ರಂದು ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ ನಡೆಸಲಾಗುವುದು’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು