ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹತ್ತು ಪಾಲಿಕೆಗಳ ಮೇಯರ್‌, ಉಪ ಮೇಯರ್‌ ಮೀಸಲಾತಿ ಪ್ರಕಟ

Published : 2 ಸೆಪ್ಟೆಂಬರ್ 2024, 15:50 IST
Last Updated : 2 ಸೆಪ್ಟೆಂಬರ್ 2024, 15:50 IST
ಫಾಲೋ ಮಾಡಿ
Comments

ಬೆಂಗಳೂರು: ಚುನಾವಣೆ ಬಾಕಿ ಇರುವ ಬಿಬಿಎಂಪಿ ಹೊರತುಪಡಿಸಿ ರಾಜ್ಯದ ಹತ್ತು ಮಹಾನಗರ ಪಾಲಿಕೆಗಳ ಮುಂದಿನ ಅವಧಿಯ ಮೇಯರ್‌ ಮತ್ತು ಉಪ ಮೇಯರ್‌ ಹುದ್ದೆಗಳ ಮೀಸಲಾತಿಯನ್ನು ನಗರಾಭಿವೃದ್ಧಿ ಇಲಾಖೆ ಸೋಮವಾರ ಪ್ರಕಟಿಸಿದೆ.

ಮೂರು ಮೇಯರ್‌ ಹುದ್ದೆಗಳು ಸಾಮಾನ್ಯ ವರ್ಗಕ್ಕೆ ಮತ್ತು ಎರಡು ಹುದ್ದೆಗಳು ಸಾಮಾನ್ಯ ಮಹಿಳೆಯರಿಗೆ ಮೀಸಲಾಗಿವೆ. ಹಿಂದುಳಿದ ವರ್ಗಗ ಪ್ರವರ್ಗ ’ಎ‘ ಮತ್ತು ಹಿಂದುಳಿದ ವರ್ಗಗಳ ಪ್ರವರ್ಗ ‘ಎ’ ಮಹಿಳೆಯರಿಗೆ ತಲಾ ಒಂದು, ಪರಿಶಿಷ್ಟ ಜಾತಿಗೆ ಮತ್ತು ಪರಿಶಿಷ್ಟ ಜಾತಿಯ ಮಹಿಳೆಯರಿಗೆ ತಲಾ ಒಂದಯ ಹಾಗೂ ಪರಿಶಿಷ್ಟ ಪಂಗಡಗಳಿಗೆ ಒಂದು ಮೇಯರ್‌ ಹುದ್ದೆಯನ್ನು ಮೀಸಲಿಡಲಾಗಿದೆ.

ಸಾಮಾನ್ಯ ವರ್ಗಕ್ಕೆ ಎರಡು ಮತ್ತು ಸಾಮಾನ್ಯ ಮಹಿಳೆಯರಿಗೆ ಮೂರು ಉಪ ಮೇಯರ್‌ ಹುದ್ದೆಗಳನ್ನು ಮೀಸಲಿಡಲಾಗಿದೆ. ಹಿಂದುಳಿದ ವರ್ಗಗಳ ಪ್ರವರ್ಗ ‘ಎ’ಗೆ ಒಂದು, ಹಿಂದುಳಿದ ವರ್ಗಗಳ ಪ್ರವರ್ಗ ‘ಎ’ ಮಹಿಳೆಯರಿಗೆ ಎರಡು , ಹಿಂದುಳಿದ ವರ್ಗಗಳ ಪ್ರವರ್ಗ ‘ಬಿ’ಗೆ ಒಂದು ಮತ್ತು ಪರಿಶಿಷ್ಟ ಜಾತಿ ಮಹಿಳೆಯರಿಗೆ ಒಂದು ಉಪ ಮೇಯರ್‌ ಹುದ್ದೆ ಮೀಸಲಿಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT